ತುರುವೇಕೆರೆ: ತಾಲೂಕಿನ ಮಾಯಸಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲೂಕು ಆಡಳಿತ ತಾಲೂಕು ಪಂಚಾಯತ್ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ತುರುವೇಕೆರೆ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ ಮತ್ತು ಗುಲಾಬಿ ಆಂದೋಲನಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ರವಿಪ್ರಕಾಶ್, ತಂಬಾಕು ಸೇವನೆ ಮಾಡುವವರಿಂದ ಅಕ್ಕಪಕ್ಕದಲ್ಲಿರುವ ಜನರಿಗೂ ತೊಂದರೆಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ಬಾಯಿ ಕ್ಯಾನ್ಸರ್, ಬ್ರೈನ್ ಟ್ಯೂಮರ್, ಕಣ್ಣಿನಲ್ಲಿ ಪೊರೆ ಇನ್ನೂ ಅನೇಕ ಕಾಯಿಲೆಗಳು ಬರುತ್ತದೆ ಎಂದರು.
ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿಯಾಗಿ ಡಾ.ಸ್ವರೂಪ ಮಾತನಾಡಿ, ತಂಬಾಕು ಸೇವನೆಯಿಂದ ದೂರ ಉಳಿಯಲು ವಿದ್ಯಾರ್ಥಿಗಳ ಮೂಲಕವೇ ಈ ಗುಲಾಬಿ ಆಂದೋಲನ ಮಾಡಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ನಿಮ್ಮಂತ ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುವವರಿಗೆ ಇದು ಅಪಾಯ ಎಂಬ ಮನವರಿಕೆಯಾಗಬೇಕು ಎಂದರು.
ಇದೇ ವೇಳೆ ಸಾರ್ವಜನಿಕರಿಗೆ, ಅಂಗಡಿ ಮುಂಗಟ್ಟುಗಳಿಗೆ ಗುಲಾಬಿ ನೀಡಿ ತಂಬಾಕು ಬಿಡಿ ಎಂಬ ಘೋಷಣೆಯೊಂದಿಗೆ ರಸ್ತೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳು, ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ಶಂಕರೇಗೌಡ, ಮಾಯಸಂದ್ರ ಸರ್ಕಾರಿ ವೈದ್ಯಾಧಿಕಾರಿ ಡಾ.ಸ್ವರೂಪ, ಆಯುಷ್ ಡಾ.ಮೌಲ್ಯ, ಆಶಾ ಕಾರ್ಯಕರ್ತೆಯರು ಯೋಗೇಶ್ ಆರೋಗ್ಯ ಶಿಕ್ಷಣ ಅಧಿಕಾರಿ, ರವಿಪ್ರಕಾಶ್ ತುಮಕೂರು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು ತುಮಕೂರು, ಯತಿರಾಜ್ ಆರೋಗ್ಯ ನಿರೀಕ್ಷಣ ಅಧಿಕಾರಿ ಮಾಯಸಂದ್ರ, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಡಿ.ಎಂ.ಶಿವಲಿಂಗೇಗೌಡ ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB