ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ಮಧ್ಯರಾತ್ರಿ 1 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಎಲ್ ಇಡಿ ದೀಪಗಳ ಅಳವಡಿಕೆ ಕಾರ್ಯ, ಬೆಳಕಿನ ವ್ಯವಸ್ಥೆ, ಕಾಮಗಾರಿಯ ಗುಣಮಟ್ಟ ಹಾಗೂ ವಿದ್ಯುತ್ ಸಂಪರ್ಕ ವ್ಯವಸ್ಥೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸರ್ಕಲ್ನ ಸೌಂದರ್ಯೀಕರಣ ಹಾಗೂ ಸಾರ್ವಜನಿಕರಿಗೆ ಸುಗಮ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.
ಅಲ್ಲದೆ, ಅಳವಡಿಸಲಾಗುತ್ತಿರುವ ಎಲ್ ಇಡಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ಬಾಕಿ ಇರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
