nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನ ಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಡಾ.ಎಚ್.ಡಿ.ರಂಗನಾಥ್

    November 7, 2026

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026
    Facebook Twitter Instagram
    ಟ್ರೆಂಡಿಂಗ್
    • ಜನ ಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಡಾ.ಎಚ್.ಡಿ.ರಂಗನಾಥ್
    • ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ
    • ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ
    • ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ
    • ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ
    ಗುಬ್ಬಿ November 7, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    By Ganesh TumkuruNovember 7, 2026No Comments2 Mins Read
    v somanna

    ಗುಬ್ಬಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ರೈಲ್ವೆ ಕ್ರಾಸಿಂಗ್‌ಗಳಲ್ಲಿ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ನೂರಾರು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

    ತಿಪಟೂರು, ಶಾರದಾನಗರ ಸೇರಿದಂತೆ ವಿವಿಧೆಡೆ ರೈಲ್ವೆ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಗುಬ್ಬಿ ತಾಲ್ಲೂಕಿನ ನಿಟ್ಟೂರು–ಮೈಸೂರು ರಸ್ತೆ ಎಲ್.ಸಿ. 58ರ ಬದಲಾಗಿ ನಿರ್ಮಾಣವಾಗುತ್ತಿರುವ ರಸ್ತೆ ಮೇಲ್ಸೇತುವೆ (ಆರ್‌ಒಬಿ), ಎನ್. ನಂದಿಹಳ್ಳಿ ಎಲ್.ಸಿ. 59ರ ಬದಲಾಗಿ ಪ್ರಗತಿಯಲ್ಲಿರುವ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ವೀಕ್ಷಿಸಿದರು. ಬಳಿಕ ಗುಬ್ಬಿ ರೈಲ್ವೆ ಹಾಗೂ ಜಲಶಕ್ತಿ ಇಲಾಖೆಯ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

    ದೇಶಾದ್ಯಂತ ಈಗಾಗಲೇ 700 ರಿಂದ 800 ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದ್ದು, ಈ ಪೈಕಿ 150ಕ್ಕೂ ಹೆಚ್ಚು ಕಾಮಗಾರಿಗಳು ಪ್ರಗತಿಯಲ್ಲಿವೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 27 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, 7 ರಿಂದ 8 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳೂ ಪ್ರಗತಿಯಲ್ಲಿದ್ದು, ಡಿಸೆಂಬರ್ 2026ರೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕೆಲವು ಕಾಮಗಾರಿಗಳು 15 ದಿನಗಳಷ್ಟು ಮುಂಚಿತವಾಗಿ ಅಥವಾ ತಡವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಎಸ್‌ ಐಆರ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

    ಎಸ್‌ ಐಆರ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸೋಮಣ್ಣ, ಸುಳ್ಳನ್ನು ನೂರು ಬಾರಿ ಹೇಳಿದರೂ ಅದು ಸತ್ಯವಾಗುವುದಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

    ಮತದಾರರ ಪಟ್ಟಿಯಿಂದ ಮೃತಪಟ್ಟವರ ಹೆಸರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರು ಹಾಗೂ ಅನರ್ಹ ಮತದಾರರ ಹೆಸರುಗಳನ್ನು ನಿಯಮಾನುಸಾರ ತೆಗೆದುಹಾಕಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಈ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳೇ ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ನಡೆಸಿರುವುದು ಸರಿಯಲ್ಲ ಎಂದು ಟೀಕಿಸಿದರು.

    ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯಿದ್ದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಹಲವು ವಿಧಾನಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಗಳು ನಡೆದಿದ್ದು, ಮುಂದಿನ ದಿನಗಳಲ್ಲಿಯೂ ಚುನಾವಣೆಗಳು ಎದುರಾಗಲಿವೆ. ಸರ್ಕಾರ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕು. ಹಲವು ಬಾರಿ ಸಲಹೆ ನೀಡಿದರೂ ರಾಜ್ಯ ಸರ್ಕಾರ ತನ್ನ ಕಾರ್ಯವೈಖರಿಯನ್ನು ಸರಿಪಡಿಸಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಆರತಿ ಬಿ., ದಿಶಾ ಸಮಿತಿ ಸದಸ್ಯ ವೈ.ಎಚ್. ಹುಚ್ಚಯ್ಯ, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಬ್ಯಾಟರಂಗೇಗೌಡ, ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜಿಲ್ಲಾ ಉಪಾಧ್ಯಕ್ಷ ಪಂಚಾಕ್ಷರಿ, ಮಂಡಲ ಅಧ್ಯಕ್ಷ ಬಲರಾಮಣ್ಣ, ಮುಖಂಡರಾದ ಚಂದ್ರಶೇಖರ್ ಬಾಬು, ಎನ್.ಸಿ. ಪ್ರಕಾಶ್, ಎಸ್.ಡಿ. ದಿಲೀಪ್, ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    ಹಾಲಿನ ದರ ಹೆಚ್ಚಳದಿಂದ ರೈತರಿಗೆ ಹೆಚ್ಚಿನ:  ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ

    November 3, 2026

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳತ್ತ ಗಮನಹರಿಸಿ: ಡಿಡಿಪಿಐ ರಘುಚಂದ್ರ

    October 31, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಜನ ಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಡಾ.ಎಚ್.ಡಿ.ರಂಗನಾಥ್

    November 7, 2026

    ಕುಣಿಗಲ್: ತಾಲ್ಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ. ಎಚ್.ಡಿ.…

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026

    ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.