nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026
    Facebook Twitter Instagram
    ಟ್ರೆಂಡಿಂಗ್
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    • ಜನ ಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಡಾ.ಎಚ್.ಡಿ.ರಂಗನಾಥ್
    • ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ
    • ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ
    • ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    ತಿಪಟೂರು November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    By Ganesh TumkuruNovember 7, 2026No Comments1 Min Read
    kt shantram

    ತಿಪಟೂರು: ಹಲ್ಕುರಿಕೆ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ, ಇದೇ ತಿಂಗಳ 23ರೊಳಗೆ ನೀರು ಹರಿಸಲು ಕ್ರಮ ಕೈಗೊಳ್ಳದಿದ್ದರೆ ಹಲ್ಕುರಿಕೆಯಿಂದ ತಿಪಟೂರು ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಕೆ.ಟಿ. ಎಚ್ಚರಿಕೆ ನೀಡಿದರು.

    ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಲ್ಕುರಿಕೆ ಕೆರೆಗೆ ನೀರು ಹರಿಸುವ ನಿಟ್ಟಿನಲ್ಲಿ ಶಾಸಕರು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ, ಇದಕ್ಕೆ ಸಂಬಂಧಿಸಿದ 36 ಎಕರೆ ಜಮೀನಿನ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿಳಂಬ ಮಾಡದೆ ಪ್ರಕ್ರಿಯೆ ಪೂರ್ಣಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

    ನ.23ರೊಳಗೆ ಕೆರೆಗೆ ನೀರು ಹರಿಸುವ ನಿರ್ಧಾರ ಕೈಗೊಳ್ಳದಿದ್ದರೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಹಲ್ಕುರಿಕೆ ನಂಜುಂಡಪ್ಪ ಅವರ ನೇತೃತ್ವದಲ್ಲಿ ರೈತರು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಹಲ್ಕುರಿಕೆಯಿಂದ ತಿಪಟೂರು ಎಸಿ ಕಚೇರಿವರೆಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.

    ರೈತರ ಕೃಷಿ ಚಟುವಟಿಕೆ ಹಾಗೂ ಜನರ ಹಿತದೃಷ್ಟಿಯಿಂದ ಜನ ಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಕುರಿಕೆ ಕೆರೆಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ  ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 4, 2026

    ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!

    November 4, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಕಮಲನಗರ (ಬೀದರ್): ತಾಲೂಕಿನ ಸೋನಾಳ ಗ್ರಾಮ ಪಂಚಾಯತಿಯಲ್ಲಿ 2026-27ನೇ ಸಾಲಿನ ಸಾಮಾಜಿಕ ಪರಿಶೋಧನೆ, ನರೇಗಾ ಯೋಜನೆ ಹಾಗೂ 15ನೇ ಹಣಕಾಸು…

    ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026

    ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.