nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್
    • ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ
    • ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ
    • ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ
    ಕೊರಟಗೆರೆ November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    By Ganesh TumkuruNovember 8, 2026No Comments2 Mins Read
    v somanna

    ಕೊರಟಗೆರೆ : ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಲೋಕಸಭಾ ಕ್ಷೇತ್ರವು 20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಮಡಕಶಿರಾ—ಮಧುಗಿರಿ—ಪಾವಗಡ–ಕೊರಟಗೆರೆ ರೈಲು ಮಾರ್ಗದಲ್ಲಿ 2027ರ ಡಿಸೆಂಬರ್ ಒಳಗಾಗಿ ರೈಲು ಸಂಚಾರ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಹಾಗೂ ತುಮಕೂರು ಸಂಸದ ವಿ. ಸೋಮಣ್ಣ ತಿಳಿಸಿದರು.

    ಪಾವಗಡ, ಮಧುಗಿರಿ, ಮಡಕಶಿರಾ ಹಾಗೂ ಕೊರಟಗೆರೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.

    ಮಡಕಶಿರಾ—ಮಧುಗಿರಿ—ಪಾವಗಡ–ಕೊರಟಗೆರೆ ರೈಲು ಮಾರ್ಗದ ಕಾಮಗಾರಿ ಚುರುಕಿನಿಂದ ಸಾಗುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ 2027ರ ಡಿಸೆಂಬರ್ ಒಳಗಾಗಿ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ತುಮಕೂರು–ಬೆಂಗಳೂರು ನಡುವೆ ಮೂರು ಅಥವಾ ನಾಲ್ಕು ಪಥದ ರೈಲ್ವೆ ಮಾರ್ಗ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ತುಮಕೂರು– ರಾಯದುರ್ಗ ನಡುವೆ ಎರಡು ಪಥದ ರೈಲು ಮಾರ್ಗ ನಿರ್ಮಾಣಕ್ಕೂ ಪ್ರಯತ್ನ ನಡೆದಿದೆ. ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ್ದು, ಗುಣಮಟ್ಟದ ಕಾಮಗಾರಿ ನಡೆಯುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು.

     ಫ್ಲೋರೈಡ್ ನೀರಿನ ಸಮಸ್ಯೆಗೆ ಪರಿಹಾರ:

    ಪಾವಗಡ ಹಾಗೂ ಮಧುಗಿರಿ ಭಾಗದ ಮಿಡಗೇಶಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.

     ಎಸ್‌ ಐಆರ್ ವಿಚಾರದಲ್ಲಿ ಸಿಎಂ ವಿರುದ್ಧ ಟೀಕೆ:

    ಎಸ್‌ಐಆರ್ ವಿಚಾರವಾಗಿ ಮುಖ್ಯಮಂತ್ರಿ ಧರಣಿ ನಡೆಸುತ್ತಿರುವುದರಿಂದ ಯಾವುದೇ ಪ್ರಯೋಜನವಿಲ್ಲ. ಅಧಿಕಾರಿಗಳನ್ನು ನೇಮಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಹಗರಣದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಇಂತಹ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದರು.

    ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತೆಗೆದುಹಾಕಲು ಫಾರಂ 6, 7 ಮತ್ತು 8ರ ಅವಕಾಶಗಳಿವೆ. ಹೆಸರು ಸೇರ್ಪಡೆ ಸುಲಭವಾಗಿದ್ದು, ಹೆಸರು ತೆಗೆದುಹಾಕುವ ಪ್ರಕ್ರಿಯೆ ಅಷ್ಟು ಸುಲಭವಲ್ಲ ಎಂದು ಹೇಳಿದರು.

     ಜೆಜೆಎಂ ಕಳಪೆ ಕಾಮಗಾರಿಗೆ ರಾಜ್ಯವೇ ಹೊಣೆ:

    ಕೇಂದ್ರ ಸರ್ಕಾರ ವಿವಿಧ ಯೋಜನೆಗಳಿಗೆ ಅನುದಾನ ಒದಗಿಸುತ್ತದೆ. ಆದರೆ ಕಾಮಗಾರಿಗಳ ಗುಣಮಟ್ಟ ಕಾಪಾಡುವುದು ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಸಾರ್ವಜನಿಕರ ಹಣದಲ್ಲಿ ನಡೆಯುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆಯೇ ಎಂಬುದನ್ನು ಪರಿಶೀಲಿಸುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ ಎಂದು ಹೇಳಿದರು.

    ಪರಮೇಶ್ವರ್ ಜತೆ 35 ವರ್ಷಗಳ ಸ್ನೇಹ:

    ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತಮ ವ್ಯಕ್ತಿಯಾಗಿದ್ದು, ನಮ್ಮಿಬ್ಬರ ಸ್ನೇಹಕ್ಕೆ 35 ವರ್ಷಗಳ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಒಟ್ಟಾಗಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಸಬಾ ಹೋಬಳಿಯ ಕೊರಟಗೆರೆ–ಹುಲೀಕುಂಟೆ ಬೈಪಾಸ್ ರಸ್ತೆಯ ರೈಲ್ವೆ ಕಾಮಗಾರಿ ಸಂದರ್ಭದಲ್ಲಿ ಸರ್ವೆ ನಂಬರ್ 52/8ರ ಜಯಣ್ಣ ಬಿನ್ ಲೇಟ್ ಸಿದ್ದಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಮೂಲ ಅಳತೆಗಿಂತ ಹೆಚ್ಚುವರಿಯಾಗಿ 10 ಅಡಿ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಸಿದ್ದರಾಜು ಆರೋಪಿಸಿದರು.

    ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಅವರು, ಸ್ಥಳ ಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಕಾಮರಾಜು, ಪವನ್ ಕುಮಾರ್, ವೆಂಕಟೇಶ್, ಲಕ್ಷ್ಮೀಶ್, ಚೇತನ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ

    November 6, 2026

    ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು

    November 6, 2026

    Leave A Reply Cancel Reply

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ತುಮಕೂರು: ಅನಾರೋಗ್ಯದಿಂದ ಗುಣಮುಖರಾಗಿ ವಿಶ್ರಾಂತಿಯಲ್ಲಿದ್ದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮತ್ತೆ ತವರು…

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.