nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?

    November 8, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು

    November 8, 2026
    Facebook Twitter Instagram
    ಟ್ರೆಂಡಿಂಗ್
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    • ಮಹಿಳೆಯರ ಕಾರ್ಯ ಸಮಾಜಕ್ಕೆ ಮಾದರಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೆ .ಎನ್. ರಾಜಣ್ಣ ವಿರುದ್ಧ ಬಾಲಕೃಷ್ಣರ ಲಘು ಹೇಳಿಕೆ ನಿಲ್ಲಲಿ: ಆದಿನಾರಾಯಣ ರೆಡ್ಡಿ
    • ಬೆದರಿಕೆ ಕರೆ: ಹೋರಾಟಗಾರರು ಪೊಲೀಸ್ ರಕ್ಷಣೆಗೆ ಮೊರೆ |   ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ
    • ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    ಜಿಲ್ಲಾ ಸುದ್ದಿ November 8, 2026

    ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ

    By Ganesh TumkuruNovember 8, 2026No Comments2 Mins Read
    bidar

    ವರದಿ: ಅರವಿಂದ ಮಲ್ಲಿಗೆ, ಬೀದರ್

    ಔರಾದ್ (ಬೀದರ್): ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಾಗ ಗ್ರಾಮೀಣ ಭಾಗದ ಬಡ ಕುಟುಂಬಗಳ ಬದುಕು ದುಸ್ತರಗೊಳ್ಳುತ್ತದೆ. ಕೆಲಸ ಅರಸಿ ದೂರದ ಊರುಗಳಿಗೆ ಗುಳೆ ಹೋಗುವುದು ಅನಿವಾರ್ಯವಾಗುವ ಇಂತಹ ಸಂಕಷ್ಟದ ಸಮಯದಲ್ಲಿ, ಸ್ವಗ್ರಾಮದಲ್ಲೇ ಉದ್ಯೋಗ ಅವಕಾಶ ಕಲ್ಪಿಸುವ ಮೂಲಕ ಸರ್ಕಾರದ ವಿಬಿ–ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರ ಪಾಲಿಗೆ ಸಂಜೀವಿನಿಯಾಗಿದೆ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ ಈ ಯೋಜನೆಯ ಸಫಲತೆಯ ಚಿತ್ರಣ ಸ್ಪಷ್ಟವಾಗಿ ಕಂಡುಬರುತ್ತಿದೆ.

    ಮಳೆ ಕೊರತೆಯಿಂದ ಕೃಷಿ ಕೆಲಸಗಳಿಲ್ಲದೆ ಪರದಾಡಬೇಕಿದ್ದ ಮಹಾರಾಜವಾಡಿ ಗ್ರಾಮಸ್ಥರಿಗೆ ವಿಬಿ–ಜಿ ರಾಮ್ ಜಿ ಯೋಜನೆ ಜೀವನಾಡಿಯಾಗಿದೆ. ಉದ್ಯೋಗಕ್ಕಾಗಿ ನೆರೆಯ ತೆಲಂಗಾಣ ರಾಜ್ಯಕ್ಕೆ ಗುಳೆ ಹೋಗಬೇಕಿದ್ದ ಅನಿವಾರ್ಯತೆಯನ್ನು ಈ ಯೋಜನೆ ತಪ್ಪಿಸಿದ್ದು, ಗ್ರಾಮದ ಹಿರಿಯರು, ಮಹಿಳೆಯರು ಹಾಗೂ ಯುವಕರು ಒಗ್ಗಟ್ಟಿನಿಂದ ಕೈಯಲ್ಲಿ ಗುದ್ದಲಿ, ಹಾರೆ, ಪಿಕಾಸಿ ಮತ್ತು ಬುಟ್ಟಿಗಳನ್ನು ಹಿಡಿದು ನಾಲಾ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ.

    ಕೇವಲ ಕೂಲಿ ಪಡೆಯುವುದಕ್ಕೆ ಸೀಮಿತವಾಗದೆ, ಗ್ರಾಮದ ಅಭಿವೃದ್ಧಿಯನ್ನು ತಮ್ಮ ಜವಾಬ್ದಾರಿ ಎಂದು ಭಾವಿಸಿ ಗ್ರಾಮಸ್ಥರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ.

    ಗ್ರಾಮಾಭಿವೃದ್ಧಿ ಮತ್ತು ಜಲಸಂಪನ್ಮೂಲ ರಕ್ಷಣೆ

    • ಸ್ಥಳೀಯ ಉದ್ಯೋಗ: ಬಡ ಕಾರ್ಮಿಕರಿಗೆ ಸ್ವಗ್ರಾಮದಲ್ಲೇ ನಿರಂತರ ಉದ್ಯೋಗ ಮತ್ತು ಸ್ಥಿರ ಆದಾಯ ದೊರೆಯುತ್ತಿದೆ.
    • ಜಲಸಂಪನ್ಮೂಲ ಸಂರಕ್ಷಣೆ: ನಾಲಾ ಹೂಳೆತ್ತುವ ಮೂಲಕ ಗ್ರಾಮದ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಪೂರಕ ವಾತಾವರಣ ನಿರ್ಮಾಣವಾಗುತ್ತಿದೆ.
    • ಆಸರೆಯಾದ ಕೂಲಿ ಹಣ: ತೀವ್ರ ಬರದ ಬೇಗೆಯಲ್ಲಿ ಕಂಗೆಟ್ಟ ಕುಟುಂಬಗಳಿಗೆ ದಿನನಿತ್ಯದ ಜೀವನ ನಿರ್ವಹಣೆಗೆ ಭರವಸೆಯ ಬೆಳಕಾಗಿದೆ.

    ಸರ್ಕಾರಿ ಯೋಜನೆಗಳು ಬರಿ ಕಡತಗಳಿಗೆ ಸೀಮಿತವಾಗದೆ ಪಾರದರ್ಶಕವಾಗಿ ಅನುಷ್ಠಾನಗೊಂಡರೆ ಸಾಮಾನ್ಯ ಜನರ ಬದುಕಿನಲ್ಲಿ ಎಂತಹ ಧನಾತ್ಮಕ ಬದಲಾವಣೆ ತರಬಲ್ಲವು ಎಂಬುದಕ್ಕೆ ಮಹಾರಾಜವಾಡಿ ಗ್ರಾಮವೇ ಒಂದು ಉತ್ತಮ ಮಾದರಿಯಾಗಿದೆ. ಗ್ರಾಮಸ್ಥರ ಸ್ವಯಂಪ್ರೇರಿತ ಭಾಗವಹಿಸುವಿಕೆ ಈ ಯೋಜನೆಗೆ ಇನ್ನಷ್ಟು ಶಕ್ತಿಯನ್ನು ತುಂಬಿದೆ.

    “ವಿಬಿ–ಜಿ ರಾಮ್ಜಿ ಯೋಜನೆಯಡಿ ಮಹಾರಾಜವಾಡಿ ಗ್ರಾಮದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವುದು ಮತ್ತು ಗ್ರಾಮದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರು ಹಾಗೂ ಹಿರಿಯರು ಸೇರಿದಂತೆ ಗ್ರಾಮಸ್ಥರು ಅತ್ಯಂತ ಉತ್ಸಾಹದಿಂದ ಈ ಕೆಲಸದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.”

    — ದಿನೇಶ್ ರೆಡ್ಡಿ, ಪಿಡಿಒ, ಜಂಬಗಿ ಗ್ರಾಪಂ

    “ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ವಿಬಿ–ಜಿ ರಾಮ್ಜಿ ಯೋಜನೆ ನೆರವಾಗುತ್ತಿದೆ. ಮಹಾರಾಜವಾಡಿಯ ಗ್ರಾಮಸ್ಥರು ಒಗ್ಗಟ್ಟಿನಿಂದ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಬರದ ಸಂದರ್ಭದಲ್ಲಿ ಹೊರರಾಜ್ಯಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಇಂತಹ ಕಾಮಗಾರಿಗಳು ಅತ್ಯಂತ ಸಹಕಾರಿ.”

    — ಶಿವಕುಮಾರ್ ಘಾಟೆ, ಸಹಾಯಕ ನಿರ್ದೇಶಕರು, ತಾಪಂ ಔರಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    Leave A Reply Cancel Reply

    Our Picks

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ನವದೆಹಲಿ: ಭಾರತದಲ್ಲಿ ವಾಯು ಮಾಲಿನ್ಯದ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶೇಷವಾಗಿ…

    ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?

    November 8, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು

    November 8, 2026

    ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.