ಬೆಂಗಳೂರು: 2026–27ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ ಹಾಗೂ ಹೋಮಿಯೋಪತಿ (PG–AYUSH) ಕೋರ್ಸ್ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
AIAPGET–2026 ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಸಂಸ್ಥೆಗಳಲ್ಲಿನ ಶೇ. 85ರಷ್ಟು ರಾಜ್ಯ ಕೋಟಾ ಸೀಟುಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಶೇ. 100ರಷ್ಟು ಆಯುರ್ವೇದ, ಹೋಮಿಯೋಪತಿ, ಯುನಾನಿ ಸೀಟುಗಳು ಮತ್ತು ಶೇ. 25ರಷ್ಟು ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಸೀಟುಗಳನ್ನು KEA ಮೂಲಕ ಭರ್ತಿ ಮಾಡಲಾಗುವುದು.
ಪ್ರಮುಖ ದಿನಾಂಕಗಳು ಮತ್ತು ವಿವರಗಳು:
ಆನ್ ಲೈನ್ ನೋಂದಣಿ: 12-11-2026ರ ಸಂಜೆ 4.00 ಗಂಟೆಯಿಂದ 15-11-2026ರ ಸಂಜೆ 4.00 ಗಂಟೆಯವರೆಗೆ KEA ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು.
ಶುಲ್ಕ ಪಾವತಿ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 2,000/- ಹಾಗೂ ಕರ್ನಾಟಕದ SC/ST ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ. 1,000/- ನೋಂದಣಿ ಶುಲ್ಕ ನಿಗದಿಪಡಿಸಲಾಗಿದ್ದು, 15-11-2026ರ ಸಂಜೆ 6.00 ಗಂಟೆಯೊಳಗೆ ಆನ್ಲೈನ್ ಮೂಲಕ ಪಾವತಿಸಬೇಕು.
ದಾಖಲೆ ಪರಿಶೀಲನೆ: ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ವೆಬ್ಸೈಟ್ನಲ್ಲಿ ಸ್ಲಾಟ್ ಬುಕ್ ಮಾಡಿಕೊಂಡು, 16-11-2026, 17-11-2026 ಅಥವಾ 18-11-2026 ರಂದು ಬೆಳಿಗ್ಗೆ 11.00 ರಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ 18ನೇ ಅಡ್ಡ ರಸ್ತೆಯಲ್ಲಿರುವ KEA ಕಚೇರಿಯಲ್ಲಿ ಮೂಲ ದಾಖಲೆಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
