nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026

    ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ

    November 16, 2026
    Facebook Twitter Instagram
    ಟ್ರೆಂಡಿಂಗ್
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    • ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ
    • ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!
    • ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ
    • ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ
    • ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ
    • ಕಾರು—ಲಾರಿ ನಡುವೆ ಭೀಕರ  ಅಪಘಾತ: ಮೂವರು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್
    ತುಮಕೂರು November 15, 2026

    ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್

    By Ganesh TumkuruNovember 15, 2026No Comments2 Mins Read
    g parameshwar

    ತುಮಕೂರು: ನಗರದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ವೃತ್ತದಲ್ಲಿ ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ಎಲ್‌ಇಡಿ (LED) ಪರದೆಯನ್ನು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಲೋಕಾರ್ಪಣೆಗೊಳಿಸಿದರು.

    ಮಕ್ಕಳ ದಿನಾಚರಣೆಯ (ನವೆಂಬರ್ 14) ವಿಶೇಷ ಸಂದರ್ಭದಲ್ಲಿ ನಗರದ ಮಕ್ಕಳಿಗೆ ಹಾಗೂ ನಾಗರಿಕರಿಗೆ ಈ ವಿನೂತನ ಡಿಜಿಟಲ್ ಡಿಸ್ಪ್ಲೇ ವ್ಯವಸ್ಥೆಯನ್ನು ಸಮರ್ಪಿಸಲಾಯಿತು.

    ಉದ್ಘಾಟನೆಯ ಬಳಿಕ ಮಾತನಾಡಿದ ಡಿಸಿಎಂ ಪರಮೇಶ್ವರ್, “ದೇಶದ ಯಾವುದೇ ಜಿಲ್ಲಾ ಕೇಂದ್ರದಲ್ಲಿ ಇಂತಹ ಬೃಹತ್ ಡಿಜಿಟಲ್ ಡಿಸ್ಪ್ಲೇ ವ್ಯವಸ್ಥೆ ಇಲ್ಲ. ವಿದೇಶಗಳ ಪ್ರಮುಖ ನಗರಗಳ ಮಾದರಿಯಲ್ಲಿ ತುಮಕೂರಿನಲ್ಲೂ ಒಂದು ಆಕರ್ಷಣೆಯ ಕೇಂದ್ರ ಇರಬೇಕೆಂಬ ಬಹುದಿನಗಳ ಕನಸು ಇಂದು ನನಸಾಗಿದೆ. ಕನ್ನಡ ರಾಜ್ಯೋತ್ಸವದಂದೇ ಇದನ್ನು ಉದ್ಘಾಟಿಸಲು ಉದ್ದೇಶಿಸಲಾಗಿತ್ತು, ಆದರೆ ದೆಹಲಿಯಿಂದ ತಾಂತ್ರಿಕ ಪರಿಕರಗಳು ಬರಲು ವಿಳಂಬವಾದ ಕಾರಣ ಮಕ್ಕಳ ದಿನಾಚರಣೆಯಂದು ಲೋಕಾರ್ಪಣೆ ಮಾಡಲಾಗಿದೆ. ಇದು ತುಮಕೂರನ್ನು ಮತ್ತಷ್ಟು ಸ್ಮಾರ್ಟ್ ಸಿಟಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ” ಎಂದರು.

    ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಗಲಿರುಳು ಶ್ರಮಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶುಭ ಅವರ ತಂಡವನ್ನು ಡಿಸಿಎಂ ಮುಕ್ತಕಂಠದಿಂದ ಶ್ಲಾಘಿಸಿದರು. “ಪಾಲಿಕೆ ಆಯುಕ್ತರು ಮತ್ತು ಅಧಿಕಾರಿಗಳು ಬೆಳಗಿನ ಜಾವ 3-4 ಗಂಟೆಯವರೆಗೂ ಸ್ಥಳದಲ್ಲೇ ಇದ್ದು ಕಾಮಗಾರಿ ನಿರ್ವಹಿಸಿ, ನಿರಂತರವಾಗಿ ಫೋಟೋಗಳನ್ನು ಕಳುಹಿಸುತ್ತಿದ್ದರು” ಎಂದು ಸ್ಮರಿಸಿದರು.

    “ಸಿದ್ಧಗಂಗಾ ಮಠವು ನಮ್ಮ ಕುಟುಂಬಕ್ಕೆ ಅವಿನಾಭಾವ ಸಂಬಂಧ ಹೊಂದಿರುವ ಸಂಸ್ಥೆ. ನಾನು 10-12 ವರ್ಷದ ಬಾಲಕನಾಗಿದ್ದಾಗ ನಡೆದಾಡುವ ದೇವರು ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು ನಮ್ಮ ಊರಿಗೆ ಬಂದು ನನ್ನನ್ನು ಆಶೀರ್ವದಿಸಿದ್ದರು. ನಮ್ಮ ಅಣ್ಣ ಡಾ. ಶಿವಪ್ರಸಾದ್ ಅವರು ಸಿದ್ಧಗಂಗಾ ಹೈಸ್ಕೂಲ್‌ನಲ್ಲೇ ವ್ಯಾಸಂಗ ಮಾಡಿದವರು. ಶ್ರೀಮಠದ ಬಗ್ಗೆ ನಮ್ಮ ಕುಟುಂಬಕ್ಕಿರುವ ಭಕ್ತಿ ಮತ್ತು ಗೌರವದ ಕುರಿತು ಯಾವುದೇ ತಪ್ಪು ಕಲ್ಪನೆಗಳಿಗೆ ಅವಕಾಶವಿಲ್ಲ” ಎಂದು ಸ್ಪಷ್ಟಪಡಿಸಿದರು.

    ವಸಂತನರಸಾಪುರದಲ್ಲಿ ಸುಮಾರು 20 ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಏಷ್ಯಾದಲ್ಲೇ ಅತಿದೊಡ್ಡ ಕೈಗಾರಿಕಾ ಹಬ್ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ಗ್ರೀನ್ ಹೈಡ್ರೋಜನ್ ಘಟಕ ಹಾಗೂ ಡೇಟಾ ಸೆಂಟರ್ ಸ್ಥಾಪನೆಗೆ ₹80 ಸಾವಿರ ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಬಂದಿದ್ದು, ಇದರಿಂದ ಸುಮಾರು 30 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ.

    ಬೆಂಗಳೂರಿನ ಭಾಗವಾಗಿ ಬೆಳವಣಿಗೆ: ತುಮಕೂರು ಇನ್ನು ಮುಂದೆ ಸಣ್ಣ ನಗರವಲ್ಲ. ರಸ್ತೆ ಸಂಪರ್ಕ ಸುಧಾರಣೆಯಿಂದಾಗಿ ಬೆಂಗಳೂರಿನ ಭಾಗವಾಗಿ ವೇಗವಾಗಿ ಬೆಳೆಯುತ್ತಿದೆ.

    ದಸರಾ ಮತ್ತು ಪೊಲೀಸ್ ಸುಧಾರಣೆ: ಕಳೆದ ಮೂರು ವರ್ಷಗಳಿಂದ ಅದ್ಧೂರಿಯಾಗಿ ನಡೆಯುತ್ತಿರುವ ತುಮಕೂರು ದಸರಾವನ್ನು ಈ ಬಾರಿ 20 ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಅಂತೆಯೇ, ಗೃಹ ಸಚಿವನಾಗಿ ಪೊಲೀಸರ ಅನುಕೂಲಕ್ಕಾಗಿ ಹಳೆಯ ಭಾರವಾದ ಕ್ಯಾಪ್ ಬದಲಿಸಿ ಆಧುನಿಕ ಕ್ಯಾಪ್ ಪರಿಚಯಿಸಿರುವುದನ್ನು ಅವರು ಉಲ್ಲೇಖಿಸಿದರು.

    ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಪಾಲಿಕೆ ಆಯುಕ್ತೆ ಶುಭ, ಟೂಡಾ (TUDA) ಆಯುಕ್ತ ಉಮೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್‌ಗೌಡ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026

    ಅಂಗವಿಕಲನಂತೆ ನಟಿಸುತ್ತೀಯಾ?: ಭಿಕ್ಷುಕನಿಗೆ ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ ಗುಂಪು!

    November 11, 2026

    ತುಮಕೂರು ನಗರಕ್ಕೆ ಶೀಘ್ರದಲ್ಲೇ 50 ಹೊಸ ಇ–ಬಸ್‌ ಗಳ ಭಾಗ್ಯ; ಪ್ರಯಾಣಿಕರ ಪರದಾಟಕ್ಕೆ ಸಿಗಲಿದೆ ಮುಕ್ತಿ!

    November 11, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಸಂಘಟನಾತ್ಮಕ ಸಭೆಯು ಯಶಸ್ವಿಯಾಗಿ ಜರುಗಿತು. ಮುಂಬರುವ ದಿನಗಳಲ್ಲಿ…

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026

    ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ

    November 16, 2026

    ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.