ತಿಪಟೂರು: ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ (ಐ.ಬಿ. ವೃತ್ತ) ಹಾಲ್ಕುರಿಕೆ ರಸ್ತೆಯ ಅಣ್ಣಾಪುರ ಗೇಟ್ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇಂದಿನಿಂದ (ನವೆಂಬರ್ 16) ಡಿಸೆಂಬರ್ 05 ರವರೆಗೆ ಆ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗದಂತೆ, ರಸ್ತೆ ಪಕ್ಕದಲ್ಲಿ ಹಾದು ಹೋಗಿರುವ 11 ಕೆ.ವಿ. ಮಾರ್ಗ, ಸೆಕೆಂಡರಿ ವಿದ್ಯುತ್ ಮಾರ್ಗ ಹಾಗೂ ಪರಿವರ್ತಕಗಳನ್ನು (ಟ್ರಾನ್ಸ್ಫಾರ್ಮರ್) ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾಮಗಾರಿಯನ್ನು ಬೆಸ್ಕಾಂ ವತಿಯಿಂದ ಕೈಗೊಳ್ಳಲಾಗಿದೆ.
ನವೆಂಬರ್ 16, 2026 ರಿಂದ ಡಿಸೆಂಬರ್ 05, 2026 ರವರೆಗೆ. ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಆಗಾಗ್ಗೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಐ.ಬಿ. ವೃತ್ತ), ಹಾಲ್ಕುರಿಕೆ ರಸ್ತೆ ಹಾಗೂ ಅಣ್ಣಾಪುರ ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಸುರಕ್ಷತಾ ದೃಷ್ಟಿಯಿಂದ ಈ ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
