ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಸಂಘಟನಾತ್ಮಕ ಸಭೆಯು ಯಶಸ್ವಿಯಾಗಿ ಜರುಗಿತು.
ಮುಂಬರುವ ದಿನಗಳಲ್ಲಿ ಎರಡೂ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ರೂಪಿಸುವುದು ಹಾಗೂ ತಳಮಟ್ಟದ ಕಾರ್ಯಕರ್ತರೊಂದಿಗೆ ಉತ್ತಮ ಸಮನ್ವಯ ಸಾಧಿಸುವ ಕುರಿತು ನಾಯಕರು ಸುದೀರ್ಘವಾಗಿ ಚರ್ಚಿಸಿದರು.



ಈ ಸಂಘಟನಾತ್ಮಕ ಸಭೆಯಲ್ಲಿ ರಾಜ್ಯ ಬಿಜೆಪಿ ಸಹ ಉಸ್ತುವಾರಿಗಳಾದ ಕಾಸಂ ವೆಂಕಟೇಶ್ವರಲು, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಸಂಸದರಾದ ಗೋವಿಂದ ಎಂ. ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಪಾಲ್ಗೊಂಡಿದ್ದರು.
ಇವರೊಂದಿಗೆ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಸುರೇಶ್ ಗೌಡ, ತುಮಕೂರು ಜಿಲ್ಲಾಧ್ಯಕ್ಷರಾದ ರವಿ ಹೆಬ್ಬಾಕ, ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ, ವಿಭಾಗ ಪ್ರಭಾರಿಗಳಾದ ಮೇಘರಾಜ್, ಸಹ ಪ್ರಭಾರಿ ಮುರುಳಿ, ಮಾಜಿ ಶಾಸಕರಾದ ಡಾ. ಹುಲಿನಾಯ್ಕರ್, ಬಸವರಾಜು, ರಾಜ್ಯ ಕಾರ್ಯದರ್ಶಿಗಳಾದ ಅಂಬಿಕಾ ಹುಲಿನಾಯ್ಕರ್, ಬೆಂಗಳೂರು ಗ್ರಾಮಾಂತರ ವಿಭಾಗದ ಪ್ರಭಾರಿ ಬ್ಯಾಟರಂಗೇಗೌಡ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
