ನೆಲಮಂಗಲ : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೋನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಲಾಗಿದ್ದು, ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.
ಸ್ಥಳೀಯ ಶಾಸಕ ಶ್ರೀನಿವಾಸ್, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಮತ್ತು ಗುಬ್ಬಿ ಶಾಸಕ ವಾಸಣ್ಣ ಅವರ ಸಹಕಾರದಿಂದ ಕ್ಷೇತ್ರಕ್ಕೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಮಠಕ್ಕೆ ಆಗಮಿಸುವ ಭಕ್ತಾದಿಗಳು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಪ್ರಯಾಣಿಸಲು ಅನುಕೂಲವಾಗಲಿದೆ.
ಬಸ್ ಸಂಚಾರದ ವೇಳಾಪಟ್ಟಿ:
ತುಮಕೂರಿನಿಂದ ಬೆಳಗ್ಗೆ 8.15ಕ್ಕೆ ಹೊರಡುವ ಕೆಎಸ್ಆರ್ಟಿಸಿ ಬಸ್ ದಾಬಸ್ಪೇಟೆ–ನರಸೀಪುರ ಮಾರ್ಗವಾಗಿ ಸಂಚರಿಸಿ ಬೆಳಗ್ಗೆ 9.30ಕ್ಕೆ ಹೋನಕಲ್ಲು ಮಲ್ಲೇಶ್ವರ ಕ್ಷೇತ್ರ ತಲುಪಲಿದೆ. ನಂತರ ಬೆಳಗ್ಗೆ 9.45ಕ್ಕೆ ಕ್ಷೇತ್ರದಿಂದ ವಾಪಸ್ ಪ್ರಯಾಣ ಆರಂಭಿಸಲಿದೆ. ಈ ಮಾರ್ಗದಲ್ಲಿ ದಿನಕ್ಕೆ ಎರಡು ಬಾರಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.
ಭಕ್ತರು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಬಸ್ ಸೌಲಭ್ಯ ಕಲ್ಪಿಸಿರುವ ತುಮಕೂರು ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕರು, ಸ್ಥಳೀಯ ಶಾಸಕ ಶ್ರೀನಿವಾಸ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಗುಬ್ಬಿ ಶಾಸಕ ವಾಸಣ್ಣ ಅವರಿಗೆ ಶ್ರೀ ಬಸವ ರಮಾನಂದ ಶ್ರೀಗಳು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.
ತ್ಯಾಮಗೊಂಡ್ಲುವಿನಿಂದ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲು ಮನವಿ
ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ ತ್ಯಾಮಗೊಂಡ್ಲುವಿನಿಂದಲೂ ಬಿಎಂಟಿಸಿ ಬಸ್ ಸಂಚಾರ ಸೌಲಭ್ಯ ಕಲ್ಪಿಸಬೇಕು ಎಂದು ಶ್ರೀ ಬಸವ ರಮಾನಂದ ಶ್ರೀಗಳು ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಧಾರ್ಮಿಕ ಕ್ಷೇತ್ರಕ್ಕೆ ಬೆಂಗಳೂರಿನಿಂದ ಆಗಮಿಸುವ ಭಕ್ತಾದಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರ ಅನುಕೂಲಕ್ಕಾಗಿ ತ್ಯಾಮಗೊಂಡ್ಲುವಿನಿಂದ ಬಿಎಂಟಿಸಿ ಬಸ್ಗಳನ್ನು ವಿಸ್ತರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
