nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೂಗಲ್‌ ನಲ್ಲಿ ನೀವು ಏನೇನು ಹುಡುಕಿದ್ದೀರಿ? ನಿಮ್ಮ ಧ್ವನಿ, ಲೊಕೇಶನ್ ಮಾಹಿತಿ ಕೂಡ ಸಂಗ್ರಹವಾಗಿರಬಹುದು; ಅಳಿಸುವುದು ಹೇಗೆ?

    November 22, 2026

    ರಾತ್ರಿ ವಾಹನ ಚಾಲನೆ ಮಾಡುವಾಗ ಹೈ ಬೀಮ್ ಲೈಟ್ ಕಾಟದಿಂದ ಪಾರಾಗುವುದು ಹೇಗೆ? ಅಪಘಾತ ತಪ್ಪಿಸಲು ಈ ಸಲಹೆ ಪಾಲಿಸಿ!

    November 22, 2026

    ಪ್ರಜಾಸೇವಾ ಅಭಿಯಾನ : ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸುವುದೇ ಅಭಿಯಾನದ ಉದ್ದೇಶ: ತಹಶೀಲ್ದಾರ್ ಬಿ. ಆರತಿ

    November 22, 2026
    Facebook Twitter Instagram
    ಟ್ರೆಂಡಿಂಗ್
    • ಗೂಗಲ್‌ ನಲ್ಲಿ ನೀವು ಏನೇನು ಹುಡುಕಿದ್ದೀರಿ? ನಿಮ್ಮ ಧ್ವನಿ, ಲೊಕೇಶನ್ ಮಾಹಿತಿ ಕೂಡ ಸಂಗ್ರಹವಾಗಿರಬಹುದು; ಅಳಿಸುವುದು ಹೇಗೆ?
    • ರಾತ್ರಿ ವಾಹನ ಚಾಲನೆ ಮಾಡುವಾಗ ಹೈ ಬೀಮ್ ಲೈಟ್ ಕಾಟದಿಂದ ಪಾರಾಗುವುದು ಹೇಗೆ? ಅಪಘಾತ ತಪ್ಪಿಸಲು ಈ ಸಲಹೆ ಪಾಲಿಸಿ!
    • ಪ್ರಜಾಸೇವಾ ಅಭಿಯಾನ : ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸುವುದೇ ಅಭಿಯಾನದ ಉದ್ದೇಶ: ತಹಶೀಲ್ದಾರ್ ಬಿ. ಆರತಿ
    • ಜನರ ಅರ್ಜಿಗಳಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಿ: ಶಾಸಕ ಸಿ.ಬಿ. ಸುರೇಶ್‌ ಬಾಬು
    • ತುಂಬಾಡಿ ಬಳಿ ಹಳ್ಳಕ್ಕೆ ನುಗ್ಗಿದ ಖಾಸಗಿ ಬಸ್; ತಪ್ಪಿದ ಭಾರೀ ಅನಾಹುತ
    • ಮನೆ, ನಿವೇಶನಗಳಿಗೆ ಅಧಿಕೃತ ಆಸ್ತಿ ಹಕ್ಕು: ಸಾರ್ವಜನಿಕರು ‘ಭೂ ಗ್ಯಾರಂಟಿ’ ಯೋಜನೆಯಡಿ ಇ-ಸ್ವತ್ತು ಪಡೆಯಲು ಇಒ ಕಿರಣ ಪಾಟೀಲ್ ಕರೆ
    • ವಿದ್ಯುತ್ ಅವಘಡಕ್ಕೆ ರೈತನ ತೋಟವೇ ಬಲಿ; 60ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಗಾಹುತಿ!
    • ಗ್ರಾಮಠಾಣಾ ಆಸ್ತಿಗಳಿಗೆ ಇ–ಸ್ವತ್ತು ಖಾತಾ ಮಾಡಿಸಿಕೊಳ್ಳಿ: ಶಿವಕುಮಾರ ಘಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಅರ್ಜಿಗಳಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಿ: ಶಾಸಕ ಸಿ.ಬಿ. ಸುರೇಶ್‌ ಬಾಬು
    ಚಿಕ್ಕನಾಯಕನಹಳ್ಳಿ November 22, 2026

    ಜನರ ಅರ್ಜಿಗಳಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಿ: ಶಾಸಕ ಸಿ.ಬಿ. ಸುರೇಶ್‌ ಬಾಬು

    By Ganesh TumkuruNovember 22, 2026No Comments2 Mins Read
    chikkanayakanahalli

    ಚಿಕ್ಕನಾಯಕನಹಳ್ಳಿ : ಪ್ರಜಾಸೇವಾ ಅಭಿಯಾನದಲ್ಲಿ ಸಾರ್ವಜನಿಕರು ಸಲ್ಲಿಸುವ ಸಮಸ್ಯೆಗಳ ಅರ್ಜಿಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಜವಾಬ್ದಾರಿಯಿಂದ ಸ್ಪಂದಿಸಬೇಕು. ಅರ್ಜಿಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಶಾಸಕ ಸಿ.ಬಿ. ಸುರೇಶ್‌ ಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಲ್ಲೂಕಿನ ಹಂದನಕೆರೆ ಹೋಬಳಿಯ ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸೀಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸಲಾಗಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರೆ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶಗಳ ವಾಸ್ತವ ಸ್ಥಿತಿಗತಿಗಳನ್ನು ಅರಿಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.

    ಈ ಬಾರಿಯ ಚುನಾವಣೆಯ ನಂತರ ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 7.33 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮದ ರಸ್ತೆಗೆ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಇದರಿಂದ ಈ ಭಾಗದ ಜನರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ತಿಳಿಸಿದರು.

    ಈ ಭಾಗದ ಸಾರ್ವಜನಿಕರು ನಿವೇಶನಕ್ಕಾಗಿ ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಠಾಣಾ ಜಾಗವನ್ನು ಗುರುತಿಸಬೇಕು. ಸರ್ಕಾರಿ ಖಾಲಿ ಜಾಗ ಲಭ್ಯವಿದ್ದಲ್ಲಿ ಅದನ್ನು ಪರಿಶೀಲಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಗ್ರೇಡ್-2 ತಹಸೀಲ್ದಾರ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಅನೇಕ ಯೋಜನೆಗಳು ಇನ್ನೂ ಅರ್ಹ ಫಲಾನುಭವಿಗಳಿಗೆ ತಲುಪಿಲ್ಲ. ಅಂತಹ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹಾಗೂ ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಪರಿಹರಿಸುವುದು ಪ್ರಜಾಸೇವಾ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸರ್ಕಾರವೆಂದರೆ ಕೇವಲ ಕಚೇರಿಯ ಕಟ್ಟಡಕ್ಕೆ ಸೀಮಿತವಲ್ಲ, ಅದು ಜನರ ನಡುವೆ ಇರಬೇಕು ಎಂಬುದನ್ನು ಈ ಕಾರ್ಯಕ್ರಮ ಸಾರುತ್ತಿದೆ. ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದರು.

    ಮತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸೀಹಳ್ಳಿ, ಮಾದಾಪುರ, ಚಟ್ಟಸಂದ್ರ, ಯಳ್ಳೇನಹಳ್ಳಿ, ಬೇಳಗಿಹಳ್ಳಿ, ಗಾಂಧಿನಗರ ಹಾಗೂ ಮತಿಘಟ್ಟ ಗ್ರಾಮಗಳಲ್ಲಿ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮಗಳು ನಡೆದವು.

    ಕಾರ್ಯಕ್ರಮದಲ್ಲಿ ಜಿಲ್ಲಾ ದಿಶಾ ಸಮಿತಿ ಸದಸ್ಯ ರಾಮಚಂದ್ರಯ್ಯ, ಬಿಇಒ ಕಾಂತರಾಜು, ಕೃಷಿ ಸಹಾಯಕ ನಿರ್ದೇಶಕ ಶಿವರಾಜ್‌ಕುಮಾರ್, ಬೆಸ್ಕಾಂ ಎಇಇ ಗವಿರಂಗಯ್ಯ, ಸಿಡಿಪಿಒ ಹೊನ್ನಪ್ಪ, ಎಇಇ ಮೋಹನ್, ಎಡಿಎಲ್‌ಆರ್ ಜಗದೀಶ್, ಉಪತಹಸೀಲ್ದಾರ್ ಯಶ್ವಂತ್, ಸ್ಥಳೀಯ ಮುಖಂಡರಾದ ರಾಜಣ್ಣ, ಉಮೇಶ್, ದೇವರಾಜು, ಚನ್ನವೀರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಅಲೆಮಾರಿ ಬುಡಕಟ್ಟು ಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 21, 2026

    ರಂಜಾನ್ ಹಾಗೂ ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆಯಲ್ಲಿ ದಿನಾಂಕ ಬದಲಾವಣೆ : ಶಾಸಕ ಸಿ.ಬಿ.ಸುರೇಶ್‌ ಬಾಬು

    November 19, 2026

    ಶೆಟ್ಟಿಕೆರೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರೈತ ಸಂಪರ್ಕ ಕೇಂದ್ರನಿರ್ಮಾಣ | ರೈತರ ಬಹುದಿನಗಳ ಬೇಡಿಕೆ ಈಡೇರಿಕೆ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 18, 2026

    Leave A Reply Cancel Reply

    Our Picks

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಗೂಗಲ್‌ ನಲ್ಲಿ ನೀವು ಏನೇನು ಹುಡುಕಿದ್ದೀರಿ? ನಿಮ್ಮ ಧ್ವನಿ, ಲೊಕೇಶನ್ ಮಾಹಿತಿ ಕೂಡ ಸಂಗ್ರಹವಾಗಿರಬಹುದು; ಅಳಿಸುವುದು ಹೇಗೆ?

    November 22, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಗೂಗಲ್ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಬೆಳಗ್ಗೆ ಎದ್ದ ತಕ್ಷಣ ಮೊಬೈಲ್‌ನಲ್ಲಿ ಏನಾದರೂ ಹುಡುಕುವುದರಿಂದ…

    ರಾತ್ರಿ ವಾಹನ ಚಾಲನೆ ಮಾಡುವಾಗ ಹೈ ಬೀಮ್ ಲೈಟ್ ಕಾಟದಿಂದ ಪಾರಾಗುವುದು ಹೇಗೆ? ಅಪಘಾತ ತಪ್ಪಿಸಲು ಈ ಸಲಹೆ ಪಾಲಿಸಿ!

    November 22, 2026

    ಪ್ರಜಾಸೇವಾ ಅಭಿಯಾನ : ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸುವುದೇ ಅಭಿಯಾನದ ಉದ್ದೇಶ: ತಹಶೀಲ್ದಾರ್ ಬಿ. ಆರತಿ

    November 22, 2026

    ಜನರ ಅರ್ಜಿಗಳಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಸ್ಪಂದಿಸಿ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.