nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!

    November 25, 2026

    ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    November 25, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!
    • ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!
    • ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
    • ನ.26ರಂದು ಚಿಕ್ಕನಾಯಕನಹಳ್ಳಿಯಲ್ಲಿ ಸರ್ವದಾರ್ಶನಿಕರ ಜಯಂತ್ಯೋತ್ಸವ  | ಎಲ್ಲ ದಾರ್ಶನಿಕರ ಜಯಂತಿ ಒಂದೇ ವೇದಿಕೆಯಲ್ಲಿ: ಶಾಸಕ ಸಿ.ಬಿ. ಸುರೇಶ್‌ ಬಾಬು
    • ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಮುದಾಯ ಭವನ ಉದ್ಘಾಟಿಸಿದ ಡಾ. ಜಿ. ಪರಮೇಶ್ವರ್
    • ಹಣ ಪಾವತಿಸಿದರೂ ಡ್ರಿಪ್ ಪರಿಕರ ವಿತರಣೆ ಇಲ್ಲ; ರೈತೋದಯ ಹಸಿರು ಸೇನೆ ಅಧ್ಯಕ್ಷ ಕುರಿಮಲ್ಲಪ್ಪ ಆಕ್ರೋಶ
    • ಕೊರಟಗೆರೆ TAPCMS ಅಧ್ಯಕ್ಷರಾಗಿ ವಿನಯ್ ಕುಮಾರ್ ಅವಿರೋಧ ಆಯ್ಕೆ
    • ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
    ತುಮಕೂರು November 25, 2026

    ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    By Ganesh TumkuruNovember 25, 2026No Comments2 Mins Read
    parameshwar

    ತುಮಕೂರು : ಜಿಲ್ಲೆಯ ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿ ಹಾಗೂ ಪಶು ಪಾಲಕರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

    ನಗರದ ಕಲ್ಟೆಕ್ಸ್ ಸರ್ಕಲ್ ಬಳಿಯ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಲಾಖೆಯ ಆಡಳಿತ ಕಚೇರಿ, ಸಭಾಂಗಣ, ಪಶು ಆಸ್ಪತ್ರೆ ಹಾಗೂ ಪಶು ಚಿಕಿತ್ಸಾಲಯಗಳ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದರ ಜೊತೆಗೆ ಪೂರ್ಣಗೊಂಡ ಕಟ್ಟಡಗಳನ್ನು ಉದ್ಘಾಟಿಸಲಾಯಿತು.

    ₹2 ಕೋಟಿ ವೆಚ್ಚದಲ್ಲಿ ಪಶು ಸಂಗೋಪನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಆಡಳಿತ ಕಚೇರಿ ಹಾಗೂ ಉಪ ನಿರ್ದೇಶಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಇಲಾಖೆಯ ಆಡಳಿತಾತ್ಮಕ ಕಾರ್ಯ ಚಟುವಟಿಕೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ಈ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಉತ್ತಮ ಕಾರ್ಯ ನಿರ್ವಹಣಾ ವಾತಾವರಣ ದೊರೆಯುವ ನಿರೀಕ್ಷೆಯಿದೆ.

    ಇದೇ ಸಂದರ್ಭದಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು. ಇಲಾಖೆಯ ಸಭೆಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ವಿವಿಧ ಶೈಕ್ಷಣಿಕ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಸಭಾಂಗಣ ಅನುಕೂಲವಾಗಲಿದೆ.

    ಗ್ರಾಮೀಣ ಭಾಗದ ಪಶು ಪಾಲಕರಿಗೆ ಸ್ಥಳೀಯವಾಗಿಯೇ ಪಶು ವೈದ್ಯಕೀಯ ಸೇವೆ ದೊರೆಯುವಂತೆ ಮಾಡುವ ಉದ್ದೇಶದಿಂದ ಬೆಳ್ಳಾವಿ ಮತ್ತು ಅರಕೆರೆ ಗ್ರಾಮಗಳಲ್ಲಿ ತಲಾ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆಗಳ ಕಟ್ಟಡಗಳನ್ನು ಉದ್ಘಾಟಿಸಲಾಯಿತು. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ರೈತರು ಮತ್ತು ಪಶು ಪಾಲಕರಿಗೆ ಜಾನುವಾರುಗಳ ಆರೋಗ್ಯ ತಪಾಸಣೆ, ಚಿಕಿತ್ಸೆ ಸೇರಿದಂತೆ ಅಗತ್ಯ ಪಶು ವೈದ್ಯಕೀಯ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ.

    ಅಲ್ಲದೆ, ಹಿರೇಗುಂಡಕಲ್ ‌ನಲ್ಲಿ ₹50 ಲಕ್ಷ ವೆಚ್ಚದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

    ಪಶು ಸಂಗೋಪನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ಹೈನುಗಾರಿಕೆ ಮತ್ತು ಜಾನುವಾರು ಸಾಕಾಣಿಕೆಯನ್ನು ಅವಲಂಬಿಸಿರುವ ರೈತರಿಗೆ ಸಕಾಲದಲ್ಲಿ ಪಶು ವೈದ್ಯಕೀಯ ಸೇವೆ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಕಟ್ಟಡಗಳ ಅಭಿವೃದ್ಧಿ, ಆಸ್ಪತ್ರೆಗಳ ಮೂಲ ಸೌಕರ್ಯ ವಿಸ್ತರಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಬಲವರ್ಧನೆಗೆ ಕೈಗೊಂಡಿರುವ ಕ್ರಮಗಳು ಪಶು ಪಾಲಕರಿಗೆ ಅನುಕೂಲ ಕಲ್ಪಿಸುವ ನಿರೀಕ್ಷೆಯಿದೆ.

    ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಿಜಾ, ಪ್ರಭಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನ ಪ್ರತಿ ನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಮುದಾಯ ಭವನ ಉದ್ಘಾಟಿಸಿದ ಡಾ. ಜಿ. ಪರಮೇಶ್ವರ್

    November 25, 2026

    1.83 ಲಕ್ಷ ರೈತರಿಗೆ ₹45.77 ಕೋಟಿ ಬೆಳೆ ಪರಿಹಾರ ವಿತರಣೆ |  ತುಮಕೂರು ಜಿಲ್ಲೆಯ 10 ತಾಲೂಕುಗಳೂ ಬರಪೀಡಿತ ಘೋಷಣೆ

    November 24, 2026

    ಸರ್ಕಾರಿ ಶಾಲೆಗಳ ದತ್ತು ನೀತಿ ಮತ್ತು ಎಡಿಬಿ ಸಾಲದ ಒಪ್ಪಂದಕ್ಕೆ ವಿರೋಧ: AIDSO ನೇತೃತ್ವದಲ್ಲಿ ವಿದ್ಯಾರ್ಥಿ–ಪೋಷಕರ ಪ್ರತಿಭಟನೆ

    November 23, 2026

    Leave A Reply Cancel Reply

    Our Picks

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026

    ಮದುವೆ ಸೀಸನ್‌ ನಿಂದ ವ್ಯಾಪಾರಿಗಳಿಗೆ ಶುಕ್ರದೆಸೆ; ದೇಶಾದ್ಯಂತ 52 ಲಕ್ಷ ಮದುವೆಗಳ ನಿರೀಕ್ಷೆ: ಇಲ್ಲಿದೆ ಲೆಕ್ಕಾಚಾರ 

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ತುರ್ತು ಹಣಕಾಸಿನ ಅಗತ್ಯ ಎದುರಾದಾಗ ವೈಯಕ್ತಿಕ ಸಾಲ (Personal Loan) ಅನೇಕರಿಗೆ ನೆರವಾಗುತ್ತದೆ. ಮನೆ ದುರಸ್ತಿ, ವೈದ್ಯಕೀಯ ವೆಚ್ಚ, ಮಕ್ಕಳ…

    ತಿಪಟೂರು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ದಬ್ಬಾಳಿಕೆ; ಬಡ ರೈತನ ಕುಟುಂಬ ಬೀದಿಗೆ!

    November 25, 2026

    ಪಶುಸಂಗೋಪನಾ ಇಲಾಖೆಗೆ ಹೊಸ ಕಾಯಕಲ್ಪ; ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    November 25, 2026

    ನ.26ರಂದು ಚಿಕ್ಕನಾಯಕನಹಳ್ಳಿಯಲ್ಲಿ ಸರ್ವದಾರ್ಶನಿಕರ ಜಯಂತ್ಯೋತ್ಸವ  | ಎಲ್ಲ ದಾರ್ಶನಿಕರ ಜಯಂತಿ ಒಂದೇ ವೇದಿಕೆಯಲ್ಲಿ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.