nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರಕ್ಕೆ ಆಗ್ರಹ

    November 27, 2026

    ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

    November 27, 2026

    ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’

    November 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರಕ್ಕೆ ಆಗ್ರಹ
    • ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
    • ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’
    • ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಿ: ಶಾಸಕ ಸಿ.ಬಿ. ಸುರೇಶ್ ಬಾಬು
    • ಕನಕದಾಸರೆಂದರೆ ಭಕ್ತಿ ಮತ್ತು ಮಾನವೀಯತೆಯ ಸಂದೇಶ
    • ಸಂವಿಧಾನದ ಆಶಯಗಳೇ ಪ್ರಬುದ್ಧ ಭಾರತದ ಅಡಿಪಾಯ: ಆರತಿ ಬಿ. | ಗುಬ್ಬಿಯಲ್ಲಿ ಸಂವಿಧಾನ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
    • ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳೇ ಹೊಣೆ — ಡಿಸಿ ಶುಭ ಕಲ್ಯಾಣ್! | ಅನುದಾನವಿಲ್ಲದೆ ಪಿಡಿಓಗಳನ್ನು ಹೊಣೆಗಾರರನ್ನಾಗಿಸಬೇಡಿ; 26 ಪಿಡಿಓಗಳಿಂದ ಸಿಇಒಗೆ ಮನವಿ
    • ಸಂವಿಧಾನದ ಆಶಯಗಳ ಪಾಲನೆಗೆ ತುಮಕೂರು ಜಿಲ್ಲಾಡಳಿತ ಸಂಕಲ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರಕ್ಕೆ ಆಗ್ರಹ
    ತುಮಕೂರು November 27, 2026

    ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರಕ್ಕೆ ಆಗ್ರಹ

    By Ganesh TumkuruNovember 27, 2026No Comments2 Mins Read
    pension
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಡಿ.1ರಿಂದ 3ರವರೆಗೆ ದೆಹಲಿಯಲ್ಲಿ ಸಿಐಟಿಯು ‘ಸಂಸತ್ ಚಲೋ’

    ತುಮಕೂರು : ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರ ನಿಗದಿಪಡಿಸುವುದು, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಸ್ಕೀಂ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 1ರಿಂದ 3ರವರೆಗೆ ನವದೆಹಲಿಯಲ್ಲಿ ಬೃಹತ್ ಸಂಸತ್ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್ ತಿಳಿಸಿದರು.

    ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಿಂದ ಒಂದು ಲಕ್ಷಕ್ಕೂ ಅಧಿಕ ಕಾರ್ಮಿಕರು ಹಾಗೂ ವಿವಿಧ ಯೋಜನೆಗಳ ನೌಕರರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ತುಮಕೂರು ಜಿಲ್ಲೆಯಿಂದ 500ಕ್ಕೂ ಹೆಚ್ಚು ಕಾರ್ಮಿಕರು ದೆಹಲಿಗೆ ತೆರಳಿ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

    ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳು ದುಡಿಯುವ ವರ್ಗದ ಹಿತಾಸಕ್ತಿಗೆ ವಿರುದ್ಧವಾಗಿವೆ. ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಜಾರಿಯಲ್ಲಿದ್ದ 29 ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿರುವುದು ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗುತ್ತಿಗೆ ಪದ್ಧತಿ ಹಾಗೂ ನಿಗದಿತ ಅವಧಿಯ ಉದ್ಯೋಗ ವ್ಯವಸ್ಥೆಯಿಂದ ಕಾರ್ಮಿಕರ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದರು.

    ಕಾರ್ಮಿಕರಿಗೆ ಕನಿಷ್ಠ ವೇತನ, ಪಿಂಚಣಿ, ಉದ್ಯೋಗ ಭದ್ರತೆ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಮುಷ್ಕರದ ಹಕ್ಕನ್ನು ರಕ್ಷಿಸಬೇಕು. ಜಲ, ಜಮೀನು ಮತ್ತು ಅರಣ್ಯ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂಬ ಬೇಡಿಕೆಗಳನ್ನು ಹೋರಾಟದಲ್ಲಿ ಮುಂದಿಡಲಾಗುವುದು ಎಂದು ತಿಳಿಸಿದರು.

    ಕನಿಷ್ಠ ವೇತನ ಪರಿಷ್ಕರಣೆಗೆ ಆಗ್ರಹ

    ರಾಜ್ಯದ ಸುಮಾರು ಒಂದೂವರೆ ಕೋಟಿ ಕಾರ್ಮಿಕರಿಗೆ ಸಂಬಂಧಿಸಿದ ಕನಿಷ್ಠ ವೇತನ ಪರಿಷ್ಕರಣೆ ವಿಳಂಬವಾಗುತ್ತಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯ ಸಮಿತಿಯು ಮಾರುಕಟ್ಟೆಯ ಬೆಲೆ ಏರಿಕೆಯನ್ನು ಪರಿಗಣಿಸಿ ಕನಿಷ್ಠ ವೇತನ ಹೆಚ್ಚಳಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಕಾರ್ಮಿಕರಿಗೆ ನ್ಯಾಯಯುತ ವೇತನ ದೊರೆಯುವಂತಾಗಬೇಕು ಎಂದು ಸೈಯದ್ ಮುಜೀಬ್ ಒತ್ತಾಯಿಸಿದರು.

    ಸ್ಕೀಂ ನೌಕರರ ವೇತನ ಹೆಚ್ಚಳಕ್ಕೆ ಒತ್ತಾಯ

    ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲ ಮಾತನಾಡಿ, ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ನೌಕರರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು, ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕೇಂದ್ರ ಸರ್ಕಾರವು ಯೋಜನೆಗಳಿಗೆ ನೀಡುವ ಅನುದಾನವನ್ನು ಕಡಿತಗೊಳಿಸುತ್ತಿರುವುದರಿಂದ ನೌಕರರು ಸಂಕಷ್ಟ ಎದುರಿಸುತ್ತಿದ್ದಾರೆ. ಸ್ಕೀಂ ನೌಕರರ ವೇತನ ಹೆಚ್ಚಿಸುವುದರ ಜತೆಗೆ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು.

    ಚುನಾವಣಾ ಪೂರ್ವದಲ್ಲಿ ಅಂಗನವಾಡಿ ನೌಕರರಿಗೆ ಮಾಸಿಕ ₹15 ಸಾವಿರ, ಬಿಸಿಯೂಟ ನೌಕರರಿಗೆ ₹10 ಸಾವಿರ ಹಾಗೂ ಆಶಾ ಕಾರ್ಯಕರ್ತೆಯರಿಗೆ ₹8 ಸಾವಿರ ವೇತನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈವರೆಗೂ ಭರವಸೆ ಈಡೇರಿಲ್ಲ. 2027-28ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಬಜೆಟ್‌ನಲ್ಲಿ ಸ್ಕೀಂ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಕೆ.ಸುಬ್ರಮಣ್ಯ ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೆ ತರಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

    ಖಾಲಿ ಹುದ್ದೆಗಳ ಭರ್ತಿ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದು, ಕಾರ್ಮಿಕರ ಕೆಲಸದ ಸ್ಥಳದ ಸುರಕ್ಷತೆ, ಮುಷ್ಕರದ ಹಕ್ಕಿನ ರಕ್ಷಣೆ, ಎಸ್‌ಐಆರ್ ಪ್ರಕ್ರಿಯೆ ರದ್ದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಸತ್ ಚಲೋ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಗಂಗಾ, ಕಸದ ವಾಹನ ಚಾಲಕರು ಮತ್ತು ಲೋಡರ್ಸ್ ಸಂಘದ ಪ್ರಧಾನ ಕಾರ್ಯದರ್ಶಿ ಮಾರುತಿ, ಪೌರ ಕಾರ್ಮಿಕರ ಸಂಘದ ಖಜಾಂಚಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸಂವಿಧಾನದ ಆಶಯಗಳ ಪಾಲನೆಗೆ ತುಮಕೂರು ಜಿಲ್ಲಾಡಳಿತ ಸಂಕಲ್ಪ

    November 27, 2026

    ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ

    November 26, 2026

    ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು

    November 25, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರ, ಪಿಂಚಣಿ ₹21 ಸಾವಿರಕ್ಕೆ ಆಗ್ರಹ

    November 27, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಡಿ.1ರಿಂದ 3ರವರೆಗೆ ದೆಹಲಿಯಲ್ಲಿ ಸಿಐಟಿಯು ‘ಸಂಸತ್ ಚಲೋ’ ತುಮಕೂರು : ಕನಿಷ್ಠ ವೇತನ…

    ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲಿಗೆ ಮಠಾಧೀಶರ ಪಟ್ಟು!  | ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

    November 27, 2026

    ತಿಪಟೂರು ನಗರಸಭೆಗೆ ರಾಜ್ಯಮಟ್ಟದ ಗೌರವದ ಗರಿ |  ವಾರ್ಡ್ ನಂ. 6ರ ಇಂದಿರಾ ಕ್ಯಾಂಟೀನ್‌ ಗೆ ‘ಅತ್ಯುತ್ತಮ ಇಂದಿರಾ ಕ್ಯಾಂಟೀನ್ ಪ್ರಶಸ್ತಿ-2026’

    November 27, 2026

    ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಿ: ಶಾಸಕ ಸಿ.ಬಿ. ಸುರೇಶ್ ಬಾಬು

    November 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.