nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ನೆರಳು ಟ್ರಸ್ಟ್ ಬದ್ಧ: ಜಗದೀಶ್ | ಮಾವಿನಹಳ್ಳಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 28, 2026

    ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್

    November 28, 2026

    WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ

    November 28, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ನೆರಳು ಟ್ರಸ್ಟ್ ಬದ್ಧ: ಜಗದೀಶ್ | ಮಾವಿನಹಳ್ಳಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್
    • WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ
    • ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ
    • ವಿವಿಧ ಸಂಘಟನೆಗಳಿಂದ ‘ಸಂವಿಧಾನ ಸಮರ್ಪಣೆ ದಿವಸ್’ ವಿಜೃಂಭಣೆಯಿಂದ ಆಚರಣೆ
    • ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕು ತಿದ್ದುವ ದಾರಿದೀಪ : ಮಮತಾಮಣಿ
    • ತುಮಕೂರಿನಲ್ಲಿ ಸಂತಶ್ರೇಷ್ಠ ಕನಕದಾಸರ 539ನೇ ಜಯಂತ್ಯೋತ್ಸವ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್
    ಮಧುಗಿರಿ November 28, 2026

    ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್

    By Ganesh TumkuruNovember 28, 2026No Comments2 Mins Read
    madhugiri

    ಮಧುಗಿರಿ : ಪಟ್ಟಣದ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು ಮುಂದಾಗಬೇಕು ಎಂದು ನ್ಯಾಯಾಧೀಶರಾದ ಸುಮಂಗಲ ಎಸ್. ಬಸವಣ್ಣೂರ್ ಮನವಿ ಮಾಡಿದರು.

    ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಈ ವರ್ಷದ ಕೊನೆಯ ರಾಷ್ಟ್ರೀಯ ಲೋಕ ಅದಾಲತ್ ಆಗಿದ್ದು, ರಾಜ್ಯದ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಲೋಕ ಅದಾಲತ್‌ನಲ್ಲಿ ಮುಖ್ಯವಾಗಿ ಪಾಲು ವಿಭಾಗದ ದಾವೆಗಳು, ಹಣ ವಸೂಲಾತಿ ಪ್ರಕರಣಗಳು ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಇದರೊಂದಿಗೆ ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದ ಕೆಲವು ಪ್ರಕರಣಗಳನ್ನೂ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಲೋಕ ಅದಾಲತ್ ಮೂಲಕ ಉಭಯ ಪಕ್ಷಗಾರರು ಪರಸ್ಪರ ಒಪ್ಪಿಗೆಯಿಂದ ರಾಜಿ ಮಾಡಿಕೊಂಡರೆ ಪ್ರಕರಣಗಳ ಸುದೀರ್ಘ ವಿಳಂಬ ತಪ್ಪಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬಹುದು. ಇದರಿಂದ ನ್ಯಾಯಾಲಯದ ಸಮಯ ಮತ್ತು ಸಾರ್ವಜನಿಕರ ಹಣವೂ ಉಳಿತಾಯವಾಗುತ್ತದೆ. ಅಲ್ಲದೆ, ಉಭಯ ಪಕ್ಷಗಳ ನಡುವಿನ ವೈಮನಸ್ಸು ದೂರವಾಗಿ ಸೌಹಾರ್ದಯುತ ಸಂಬಂಧಕ್ಕೆ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಸಾರ್ವಜನಿಕರು ಲೋಕ ಅದಾಲತ್‌ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ನ್ಯಾಯಾಧೀಶರಾದ ವೆಂಕಟಪ್ಪ ಬಿ. ಮಾತನಾಡಿ, ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಲೋಕ ಅದಾಲತ್‌ ನಲ್ಲಿ ಪಾಲು ವಿಭಾಗದ ದಾವೆಗಳು, ಘೋಷಣಾ ದಾವೆಗಳು, ತಡೆಯಾಜ್ಞೆ ದಾವೆಗಳು, ಮೋಟಾರು ವಾಹನ ಪರಿಹಾರ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯೊಂದಿಗೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಸುದ್ದಿಗೋಷ್ಠಿಯಲ್ಲಿ ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ವೈಜನಾಥ್ ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಮಹಿಳಾ ವಿಚಾರಗೋಷ್ಠಿ — ಕಾನೂನು ಅರಿವು ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಂದಿನಿ

    November 28, 2026

    ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ

    November 25, 2026

    300 ಮೊಟ್ಟೆ ಚಾಕಿಯಿಂದ 250 ಕೆ.ಜಿ. ರೇಷ್ಮೆ ಗೂಡು ಉತ್ಪಾದನೆ ಸಾಧ್ಯ: ಮೋಹನ್

    November 25, 2026

    Leave A Reply Cancel Reply

    Our Picks

    LPG ಗ್ರಾಹಕರೇ ಗಮನಿಸಿ! ಡಿಸೆಂಬರ್ 1ರಿಂದ ಗ್ಯಾಸ್ ಸಿಲಿಂಡರ್ ಬುಕಿಂಗ್ ಬಂದ್ ಆಗುತ್ತಾ? ಇ-ಕೆವೈಸಿ ಬಗ್ಗೆ ಮಹತ್ವದ ಮಾಹಿತಿ

    November 27, 2026

    ಚಲಿಸುವ ಎಸಿ ರೈಲಿನಲ್ಲೇ ದೀಪ ಹಚ್ಚಿ ಶಂಖನಾದ, ಪೂಜೆ! ರೈಲ್ವೆ ಕಾಯ್ದೆ ಏನು ಹೇಳುತ್ತದೆ ಗೊತ್ತಾ?

    November 27, 2026

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಸರ್ಕಾರಿ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ನೆರಳು ಟ್ರಸ್ಟ್ ಬದ್ಧ: ಜಗದೀಶ್ | ಮಾವಿನಹಳ್ಳಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 28, 2026

    ಗುಬ್ಬಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದೂ ಅಷ್ಟೇ ಮುಖ್ಯವಾದ ಕರ್ತವ್ಯವಾಗಿದೆ ಎಂದು…

    ಡಿ.12ರ ಲೋಕ ಅದಾಲತ್‌ ನಲ್ಲಿ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ: ನ್ಯಾ. ಸುಮಂಗಲ ಎಸ್. ಬಸವಣ್ಣೂರ್

    November 28, 2026

    WWE ಖ್ಯಾತಿಯ ಕುಸ್ತಿಪಟು ಬ್ರಾನ್ಸನ್ ರೀಡ್ ನಿಧನ

    November 28, 2026

    ಶಿವಣ್ಣ ಮಾಡಬೇಕಿದ್ದ ಆ ಸೂಪರ್ ಹಿಟ್ ಸಿನಿಮಾದಲ್ಲಿ ನಟಿಸಿದ್ದು ಡಾ.ರಾಜ್‌ ಕುಮಾರ್! ಆ ಇತಿಹಾಸ ಸೃಷ್ಟಿಸಿದ ಚಿತ್ರ ಯಾವುದು ಗೊತ್ತಾ?

    November 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.