- ರಾಜೇಶ್ ರಂಗನಾಥ್
ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಉಚ್ಛನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಶಾಲಾ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂಬ ತೀರ್ಪು ನೀಡಿದೆ. ಸುದೀರ್ಘ ವಿಚಾರಣೆ ವಾದ ಪ್ರತಿವಾದವನ್ನು ಆಲಿಸಿದ ರಾಜ್ಯ ಉಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ಹಿಜಾಬ್ ವಿವಾದಕ್ಜೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾರಂಭಗೊಂಡ ಹಿಜಾಬ್ ವಿವಾದ ರಾಜ್ಯದಾದ್ಯಂತ ಹಬ್ಬಿ ಕೊನೆಗೆ ದೇಶ ವಿದೇಶಗಳಲ್ಲೂ ಪ್ರತಿಧ್ವನಿಸಿತ್ತು. ಕಳೆದ ಫೆ. 11 ರಂದು ಉಚ್ಛನ್ಯಾಯಾಲಯ ಮಧ್ಯಂತರ ಆದೇಶವೊಂದನ್ನು ನೀಡಿ ತೀರ್ಪು ಕಾಯ್ದಿರಿಸಿತ್ತು.
ಮಧ್ಯಂತರ ಆದೇಶದ ಅನ್ವಯ ತೀರ್ಪು ಪ್ರಕಟವಾಗುವವರೆಗೂ ಧಾರ್ಮಿಕ ಚಿನ್ಹೆ ಹಾಗೂ ಧಾರ್ಮಿಕತೆಯನ್ನು ಬಿಂಭಿಸುವ ಯಾವುದೇ ರೀತಿಯ ಉಡುಪು ಧರಿಸಬಾರದು ಹಾಗೆಯೇ ಎಂದಿನಂತೆ ಶೈಕ್ಷಣಿಕ ವ್ಯವಸ್ಥೆ ನಡೆಯಬೇಕು ಎಂದು. ಸುದೀರ್ಘ ಚರ್ಚೆ, ವಾದ ಪ್ರತಿವಾದ, ಹಾಗೂ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ನ ತ್ರಿಸದಸ್ಯ ಪೀಠ ಶಾಲಾಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಅವಕಾಶ ನೀಡಿ ಹಿಜಾಬ್ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು ಹೈಕೋರ್ಟ್ ನ ನ್ಯಾಯ ಮೂರ್ತಿಗಳಾದ ರಿತುರಾಜ್ ಅವಾಸ್ಥಿ, ಕೃಷ್ಣ ದೀಕ್ಷಿತ್, ಖಾಜಿ ಜೈಬುನ್ನಿಸ ರವರುಗಳನ್ನೊಳಗೊಂಡ ತ್ರಿಸದಸ್ಯ ಪೀಠ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಹೀಗಾಗಿ ಈ ಸಂಬಂಧ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ಆದೇಶ ನೀಡಿದ್ದಾರೆ
ಅಂತಿಮವಾಗಿ ಕಳೆದ 3 ತಿಂಗಳಿಂದ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಹಿಜಾಬ್ ವಿವಾದಕ್ಕೆ ಅಂತಿಮ ತೀರ್ಪು ಹೊರಬಿದ್ದಿದ್ದು ಮುಂದೆ ಇದು ಯಾವ ರೀತಿಯ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB