ತುರುವೇಕೆರೆ: ತಾಲೂಕಿನ ಮಾಯಸಂದ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 12ರಿಂದ 14 ವರ್ಷದ ಮಕ್ಕಳಿಗೆ ಕೊರೋನ ತಡೆಗಟ್ಟುವ ಕೊವಿಡ್ ವ್ಯಾಕ್ಸಿನ್ ಕಾರ್ಯಕ್ರಮ ನಡೆಯಿತು .
ಈ ಕಾರ್ಯಕ್ರಮವನ್ನು. ಮಾಯಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಗೌರಮ್ಮ, ಸರ್ಕಾರಿ ವೈದ್ಯಾಧಿಕಾರಿ ಡಾ. ಸ್ವರೂಪ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿ ಡಾ.ಸ್ವರೂಪ, ಇಂದು 12ರಿಂದ 14 ವರ್ಷದವರೆಗಿನ ಸುಮಾರು 50ರಿಂದ ನೂರು ಮಕ್ಕಳಿಗೆ. ವ್ಯಾಕ್ಸಿನ್ ಕೊಡಲಾಗುವುದು. ಮುಂದಿನ ದಿನಗಳಲ್ಲಿ ನಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ 12ರಿಂದ 14 ವರ್ಷದ ಮಕ್ಕಳಿಗೆ ಈ ವ್ಯಾಕ್ಸಿನ್ ಕೊಡಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಎಚ್.ಪಿ.ಎಸ್. ಸರ್ಕಾರಿ ಶಾಲೆ .ಹಾಗೂ ಬಾಲಿಕಾ ಪ್ರೌಢಶಾಲೆ ಮಾಯಸಂದ್ರ, ಜ್ಞಾನವಾಹಿನಿ ಕಾನ್ವೆಂಟ್ ಶಾಲಾ ವಿದ್ಯಾರ್ಥಿಗಳು, ಈ ಶಾಲೆಗಳ ಉಪಾಧ್ಯಾಯರುಗಳಾದ ಶಿವಲಿಂಗೇಗೌಡ , ಸಿದ್ದಲಿಂಗಯ್ಯ, ಗೀತಾ ಹಾಗೂ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB