ತುಮಕೂರು: ತುಮಕೂರು ನಗರದ 19 ವರ್ಷದ ಯುವತಿಯ ಸಾವು ಪ್ರಕರಣದ ಪ್ರಮುಖ ಆರೋಪಿಯಾದ ರಾಜೇಂದ್ರ ಕುಮಾರ್ ನನ್ನು ಗುರುವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ.
ಇನ್ನು ಪ್ರಕರಣದ ಪ್ರಮುಖ ಆರೋಪಿಯಾದ ರಾಜೇಂದ್ರ ಕುಮಾರ್ ಹಾಗೂ ಇತರರು ತಲೆಮರೆಸಿಕೊಂಡಿದ್ದರು. ಆದರೆ ಕೊನೆಗೂ ತುಮಕೂರು ಪೊಲೀಸರು ಪ್ರಮುಖ ಆರೋಪಿ ರಾಜೇಂದ್ರಕುಮಾರ್ ನನ್ನ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು, ಗುರುವಾರ ಮಧ್ಯಾಹ್ನ ಪ್ರಮುಖ ಆರೋಪಿ ರಾಜೇಂದ್ರಕುಮಾರ್ ನನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ತುಮಕೂರು ನಗರದ 19 ವರ್ಷದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದ ಪ್ರಮುಖ ಆರೋಪಿ ರಾಜೇಂದ್ರ ಕುಮಾರ್ ವಿರುದ್ಧ ಮೃತ ಯುವತಿಯ ತಾಯಿ ದೂರು ದಾಖಲಿಸಿದ್ದರು. ತಾಯಿ ದೂರಿನನ್ವಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯ ಮರಣೋತ್ತರ ಪರೀಕ್ಷೆ.
ಕಳೆದ ಮೂರು ದಿನಗಳ ಹಿಂದೆ ಯುವತಿಯ ಮೃತದೇಹವನ್ನು ಬೆಂಗಳೂರಿನ ಸ್ಥಳೀಯ ಅಧಿಕಾರಿಗಳು ವೈದ್ಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರಿನ ಶಾಂತಿನಗರದ ಭಾರತೀಯ ಕ್ರೈಸ್ತ ಸಮಾಧಿ ಗೇಟ್ ನಲ್ಲಿರುವ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಮಣ್ಣು ಮಾಡಿದ್ದ ಸ್ಥಳದಿಂದ ಮೃತ ದೇಹವನ್ನು ಹೊರತೆಗೆದು ಯುವತಿಯ ದೇಹದಿಂದ ಕೆಲವು ಅಂಗಾಂಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಲಾಗಿದ್ದು ಪರೀಕ್ಷಾ ವರದಿಗಾಗಿ ತನಿಖಾ ತಂಡ ಕಾಯುತ್ತಿದೆ ಎನ್ನಲಾಗಿದೆ.
ಇದರ ಬೆನ್ನಲ್ಲೇ ಪ್ರಮುಖ ಆರೋಪ ಹೊತ್ತ ರಾಜೇಂದ್ರ ಕುಮಾರ್ ಬಂಧನವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ಮಾರ್ಚ್ 8ರಂದು ರಾಜೇಂದ್ರ ಹಾಗೂ ಇತರರ ವಿರುದ್ಧ ತುಮಕೂರು ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ದೂರು ದಾಖಲಿಸಿದ್ದರು .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB