nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ.ಪರಮೇಶ್ವರ್,  ಕೆ.ಎನ್.ರಾಜಣ್ಣ ಜಿಲ್ಲೆಗೆ ರಾಮ ಲಕ್ಷ್ಮಣರಿದ್ದಂತೆ: ಡಿ.ಸಿ.ಅರುಣ್ ಕುಮಾರ್
    ಕೊರಟಗೆರೆ March 18, 2022

    ಡಾ.ಜಿ.ಪರಮೇಶ್ವರ್,  ಕೆ.ಎನ್.ರಾಜಣ್ಣ ಜಿಲ್ಲೆಗೆ ರಾಮ ಲಕ್ಷ್ಮಣರಿದ್ದಂತೆ: ಡಿ.ಸಿ.ಅರುಣ್ ಕುಮಾರ್

    By adminMarch 18, 2022No Comments2 Mins Read
    tumakuru nataka

    ಕೊರಟಗೆರೆ : ಡಾ.ಜಿ.ಪರಮೇಶ್ವರ್,  ಕೆ.ಎನ್.ರಾಜಣ್ಣ ಅವರು ತುಮಕೂರು ಜಿಲ್ಲೆಗೆ ರಾಮ-ಲಕ್ಷ್ಮಣರಿದ್ದಂತೆ ಎಂದು ಮಾಜಿ ಸಚಿವ ದಿವಂಗತ ಚೆನ್ನಿಗಪ್ಪನವರ ಹಿರಿಯ ಪುತ್ರ ಡಿ.ಸಿ.ಅರುಣ್ ಕುಮಾರ್ ಹೇಳಿದರು.

    ತಾಲ್ಲೂಕಿನ ಕೋಳಾಲ ಹೋಬಳಿಯ ಕುರುಬರಪಾಳ್ಯ(ಮಜರೆ ಪುಟ್ಟ ಸಂದ್ರ)ಗ್ರಾಮದಲ್ಲಿ ಶ್ರೀ ಮುತ್ತುರಾಯಸ್ವಾಮಿ ಕೃಪಾ ಪೋಷಿತ ನಾಟಕ ಮಂಡಳಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕುರುಕ್ಷೇತ್ರ ನಾಟಕದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

    ತುಮಕೂರು ಜಿಲ್ಲೆಗೆ ಡಾ.ಜಿ. ಪರಮೇಶ್ವರ್ ಮತ್ತು ಕೆ.ಎನ್. ರಾಜಣ್ಣ ರಾಮ-ಲಕ್ಷ್ಮಣರು ಇದ್ದಂತೆ, ಇಬ್ಬರೂ ಸೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಕೊರಟಗೆರೆ ತಾಲ್ಲೂಕು ಮತ್ತು ಮಧುಗಿರಿ ತಾಲ್ಲೂಕುಗಳನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮವಹಿಸುತ್ತಿದ್ದಾರೆ  ಎಂದರು.

    ಮಧುಗಿರಿ ಶೈಕ್ಷಣಿಕ ಜಿಲ್ಲೆಯನ್ನು ಕಂದಾಯ ಜಿಲ್ಲೆಯನ್ನಾಗಿ ಮಾಡಲು ಕೆ.ಎನ್.ರಾಜಣ್ಣ ಬಹಳ ಶ್ರಮವಹಿಸುತ್ತಿದ್ದಾರೆ.  ಇವರಿಬ್ಬರಿಂದ ನಮ್ಮ ತುಮಕೂರು ಜಿಲ್ಲೆಯು ಮುಂದೊಂದು ದಿನ ದೊಡ್ಡ ಮಟ್ಟದಲ್ಲಿ  ಅಭಿವೃದ್ಧಿ ಹೊಂದುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ, ರಾಜ್ಯದ ಮುಖ್ಯಮಂತ್ರಿಗಳಾಗಿ  ಡಿ.ಕೆ.ಶಿವಕುಮಾರ್ ಮತ್ತು ಡಾ.ಜಿ.ಪರಮೇಶ್ವರ್ ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಲಿದ್ದಾರೆ. ತುಮಕೂರು ಜಿಲ್ಲೆಯ ಹಿರಿಯ ಸಹೃದಯಿ ರಾಜಕಾರಣಿಯಾದ ಕೆ.ಎನ್.ರಾಜಣ್ಣ ತುಮಕೂರು ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

    ನಂತರ ಮಾತನಾಡಿದ ನಾಟಕ ಅಕಾಡೆಮಿಯ ಸದಸ್ಯರಾದ ಮೈಲಾರಪ್ಪ, ತುಮಕೂರು ಜಿಲ್ಲೆಯು ಕಲಾವಿದರ ಕಣಜವಿದ್ದಂತೆ ಅದರಲ್ಲೂ ಕೊರಟಗೆರೆ ತಾಲ್ಲೂಕಿನ ಕಲಾವಿದರು ಒಳ್ಳೆಯ ಕಲಾವಿದರು ಎಂದರು. ತಾಲ್ಲೂಕಿನ ರಂಗಭೂಮಿ ಮತ್ತು ಇತರೆ ಕಲಾವಿದರುಗಳಿಗೆ ಚೆನ್ನಿಗಪ್ಪನವರ  ಕಾಲದಿಂದಲೂ ಕೂಡ ಕಲಾವಿದರ ಕಷ್ಟ-ಸುಖಗಳಿಗೆ ಸ್ಪಂದಿಸುತ್ತಾ ಕಲಾವಿದರ ಏಳಿಗೆಗಾಗಿ ಸಹಾಯ ಮಾಡುತ್ತಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಡಿಸಿ ಅರುಣ್ ಕುಮಾರ್ ರವರು ಕುರುಕ್ಷೇತ್ರ ನಾಟಕದಲ್ಲಿ ಭಾಗವಹಿಸಿದಂತಹ ಎಲ್ಲಾ ಕಲಾವಿದರುಗಳಿಗೆ ಸಹಾಯಧನವನ್ನು ನೀಡಿ ಪ್ರೋತ್ಸಾಹಿಸಿದರು.

    ಈ ಸಂದರ್ಭದಲ್ಲಿ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಅರಕೆರೆ ಶಂಕರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್,ನಾಟಕ ಅಕಾಡೆಮಿ ಸದಸ್ಯರಾದ ಮೈಲಾರಪ್ಪ, ಮಲ್ಲಿಕಾರ್ಜುನಯ್ಯ,ಪಾಲಣ್ಣ, ಪ್ರಸನ್ನಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನಯಕುಮಾರ್, ಶಾಸಕರ ಆಪ್ತ ಕಾರ್ಯದರ್ಶಿ ಅರವಿಂದ್, ಮತ್ತು ರುದ್ರೇಶ್,  ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಯುವಕರು, ಕಲಾಪೋಷಕರು, ಅಭಿಮಾನಿಗಳು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು…

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.