nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲು ರೈತಸಂಘದಿಂದ  ಧರಣಿ ಸತ್ಯಾಗ್ರಹ
    ಜಿಲ್ಲಾ ಸುದ್ದಿ March 20, 2022

    ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲು ರೈತಸಂಘದಿಂದ  ಧರಣಿ ಸತ್ಯಾಗ್ರಹ

    By adminMarch 20, 2022No Comments2 Mins Read
    bhadra meldande yojane

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸ ಸಾಗರಕ್ಕೆ 10 ಟಿ ಎಂ ಸಿ ನೀರು ಮೀಸಲಿಟ್ಟು, ಧರ್ಮಪುರ ಮತ್ತು ಜೆಜಿ ಹಳ್ಳಿ ಹೋಬಳಿಗಳ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದು ತಾಲ್ಲೂಕು ರೈತಸಂಘದ  ಅಧ್ಯಕ್ಷರಾದ  ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು.

    ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗೆ ಸೇರಿಸಲು ಹಾಗೂ ಹಿರಿಯೂರು ನಗರದ ಸಕ್ಕರೆ ಕಾರ್ಖಾನೆಯನ್ನು ಪುನಃ  ಪ್ರಾರಂಭಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಭದ್ರಾ ಮೇಲ್ದಂಡೆ ಯೋಜನೆ ಈ ಹಿಂದಿನ ಬಿಜೆಪಿ ಸರ್ಕಾರ ತಾತ್ಕಾಲಿಕವಾಗಿ 5 ಟಿಎಂಸಿ ನೀರನ್ನು ಮಂಜೂರು ಮಾಡಲಾಗಿತ್ತು. ಆದರೆ ತದ ನಂತರ ಬಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದನ್ನು 2ಟಿಎಂಸಿ ನೀರಿಗೆ ಸೀಮಿತಗೊಳಿಸಲಾಯಿತು. ಈಗಾಗಲೇ ಸರ್ಕಾರ ಕುಡಿಯುವ ಸಲುವಾಗಿ ಹಿರಿಯೂರು ನಗರಕ್ಕೆ ಹಾಗೂ ತಾಲೂಕಿನ 168 ಗ್ರಾಮಗಳಿಗೆ, ಚಳ್ಳಕೆರೆನಗರಕ್ಕೆ ಹಾಗು ಹಳ್ಳಿಗಳಿಗೆ ಡಿ.ಆರ್.ಡಿ.ಓ ಹಾಗೂ ಚಿತ್ರದುರ್ಗ ನಗರಕ್ಕೆ ಹೊಳಲ್ಕೆರೆ ಗ್ರಾಮ ಮತ್ತು ತಾಲ್ಲೂಕಿನ 198 ಗ್ರಾಮಗಳಿಗೆ ಕುಡಿಯುವ ನೀರು ಹರಿಸಬೇಕಿದೆ.  ಅಲ್ಲದೆ ತಾಲ್ಲೂಕಿನ ವಾಣಿವಿಲಾಸ ಸಾಗರದ ಅಚ್ಚುಕಟ್ಟು ಪ್ರದೇಶಕ್ಕೆ, ಕಾರ್ಖಾನೆಗಳಿಗೆ ಮತ್ತು ವ್ಯವಸಾಯದ ಉದ್ದೇಶಕ್ಕೆ ಎಲ್ಲಾ ಸೇರಿ ನೀರಾವರಿ ಇಲಾಖೆ ಮಾಹಿತಿ ಪ್ರಕಾರ 8.506 ಟಿ.ಎಂಸಿ ನೀರು ಮೀಸಲಿಟ್ಟಿರುವುದು ಆನೆಯ ಹೊಟ್ಟೆಗೆ ಹಪ್ಪಳವಿಟ್ಟಂತಾಗಿದೆ ಎಂಬುದಾಗಿ ಅವರು ಹೇಳಿದರು.


    Provided by
    Provided by

    ಈ ಬಾರಿ ವಾಣಿವಿಲಾಸ ಸಾಗರಕ್ಕೆ ಹೆಚ್ಚಿನ ಮಳೆಯಿಂದ ಹೆಚ್ಚಿನ ನೀರು ಸಂಗ್ರಹವಾಗಿದ್ದು, ತುಮಕೂರು ಹಾಗೂ ಚಿತ್ರದುರ್ಗ ಭಾಗದ ಭದ್ರಾ ನಾಲೆಯ ಕಾಲುವೆಗಳಿಗೆ ನೀರು ಹರಿಸಲು ಪ್ರಾರಂಭವಾದರೆ, ಸಾಗರದ ನೀರಿನ ಪ್ರಮಾಣ ಡೆಡ್ ಸ್ಟೋರೇಜ್ ತಲುಪುವುದು ಗ್ಯಾರೆಂಟಿಯಾಗಿದೆ. ಇದರಿಂದ ತಾಲ್ಲೂಕಿನ ಅಂತರ್ಜಲ ಬತ್ತಿ ಹೋಗಿ 2 ವರ್ಷಗಳ ಹಿಂದಿನಂತೆ ಲಕ್ಷಾಂತರ ಅಡಕೆ-ತೆಂಗಿನ ಮರಗಳು ಸೇರಿದಂತೆ ಬಾಳೆ ದಾಳಿಂಬೆಯಂತಹ ತೋಟದ ಬೆಳೆಗಳು ಒಣಗಿಹೋಗುವ ಪರಿಸ್ಥಿತಿ ಮತ್ತೆ ಮರುಕಳಿಸಿ ರೈತರು ಆತ್ಮಹತ್ಯೆಯ ದಾರಿ ಹಿಡಿಯಬೇಕಾಗಿರುತ್ತದೆ. ಆದ್ದರಿಂದ ವಾಣಿವಿಲಾಸ ಸಾಗರಕ್ಕೆ ಸರ್ಕಾರ ಪ್ರತಿವರ್ಷ ಸುಮಾರು 10 ಟಿಎಂಸಿ ನೀರನ್ನು ಮೀಸಲಿಡಬೇಕು ಧರ್ಮಪುರ ಹಾಗೂ ಜೆಜಿಹಳ್ಳಿ ಹೋಬಳಿಗಳಿಗೆ ಹಾಗೂ ಕಲ್ಲುವಳ್ಳಿ ಭಾಗಕ್ಕೆ 2 ನಾಲೆಗಳ ಮುಖಾಂತರ ರೈತರ ಜಮೀನುಗಳಿಗೆ ನೀರು ಹರಿಸಿ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದರು.

    ತಾಲ್ಲೂಕಿನ ಕಸಬಾ ಹೋಬಳಿ ಮತ್ತು ಐಮಂಗಲ ಹೋಬಳಿ ಸೇರಿದಂತೆ ತಾಲೂಕಿನ ಎಲ್ಲಾ ಭಾಗಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕು, ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಗೆ ಸೇರಿಸಬೇಕು. ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಕೆ.ಟಿ.ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ, ಮಂಜುನಾಥ್, ದೇವೇಂದ್ರಪ್ಪ ತಿಮ್ಮಣ್ಣ, ಶ್ರೀರಂಗಮ್ಮ, ಗಂಗಮ್ಮ, ತಿಮ್ಮಣ್ಣ, ವೈ.ಶಿವಣ್ಣ, ರಮೇಶ್, ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.