ತುಮಕೂರು: ಪಾವಗಡ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಪಾವಗಡ ಸಮೀಪ ಬಸ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು, ಗಾಯಗೊಂಡಿರುವ ರೋಗಿಗಳಿಗೆ ಪರಿಹಾರ ಕೊಡಬೇಕು ಹಾಗೂ ಈ ಭಾಗದಲ್ಲಿ ಹೆಚ್ಚಿನ ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್ಸಿ ಅಂಜನಪ್ಪ, ಬೆಳ್ಳಿ ಲೋಕೇಶ್, ಪಾವಗಡದ ತಿಮ್ಮರಾಯಪ್ಪ, ಗುಬ್ಬಿ ನಾಗರಾಜು ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB