nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ
    ಕೊರಟಗೆರೆ November 7, 2024

    10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ

    By adminNovember 7, 2024No Comments2 Mins Read
    ksrtc

    ಕೊರಟಗೆರೆ: ಕೆಎಸ್ ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನು ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ.

    ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನಾಗರಿಕ ‌ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದ್ದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ ಸೇರಿದ 10 ವರ್ಷದ ಬಾಲಕಾರ್ಮಿಕ ಹಾಗೂ ಓರ್ವ ವ್ಯಕ್ತಿ ನಿಲ್ದಾಣದಲ್ಲಿ ಮಲವನ್ನ ಸ್ವಚ್ಚಗೊಳಿಸುತ್ತಿದ್ದ ದೃಶ್ಯ ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ದಲಿತರಿಂದ ಮಲ ಸ್ವಚ್ಚಗೊಳಿಸುವ ಕೆಲಸ ಮಾಡಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ಮಾಧ್ಯಮದವರನ್ನ ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಮಾಧ್ಯಮದವರು ಬಾಲಕನನ್ನ ಮಾತನಾಡಿಸಿದ ವೇಳೆ, ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕುಮಾರಣ್ಣ ಎಂಬುವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ, ನಾನು ಪರಿಶಿಷ್ಟ ಜಾತಿಗೆ  ಸೇರಿದ್ದು ತನಗೆ 10 ವರ್ಷ ವಯಸ್ಸು ಎಂದು ಬಾಲಕ ಹೇಳಿಕೊಂಡಿದ್ದಾನೆ.

    ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದ ಬಾಲಕನಿಗೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ದೂರದಿಂದಲೇ ಕೈಸನ್ನೆ ಮಾಡಿ ಮಾತನಾಡದಂತೆ ಗದರಿಸುತ್ತಾನೆ. ಕೂಡಲೇ ಬಾಲಕ ತಾವು ಕೆಲಸ ಮಾಡಲು ಬಳಸುತ್ತಿದ್ದ ಗುದ್ದಲಿ, ಬಾಣಲಿ ತೆಗೆದುಕೊಂಡು ಅಸಹಾಯಕತೆಯಿಂದ ಅಲ್ಲಿಂದ ಶೌಚಾಲಯದ ಕಡೆ ತೆರಳಿದ್ದು ಸಿಬ್ಬಂದಿಯ ದೌರ್ಜನ್ಯಕ್ಕೆ ಸಾಕ್ಷಿಯಾಯಿತು.

    ಪಟ್ಟಣ ಪಂಚಾಯ್ತಿಯಲ್ಲಿ ಇರುವ ಸೆಪ್ಟಿಕ್ ಟ್ಯಾಂಕ್ ಯಂತ್ರದ ಮೂಲಕ ತುಂಬಿದ ಶೌಚಗುಂಡಿಯನ್ನ ಸ್ವಚ್ಛಗೊಳಿಸದೇ ನಿಲ್ದಾಣದ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ. ಶೌಚಗುಂಡಿ ತುಂಬಿ ನಿಲ್ದಾಣದ ಫ್ಲಾಟ್ ಫಾರಂಗೆ ಹರಿಯತೊಡಗಿದೆ. ಇದು ನಿಲ್ದಾಣದಲ್ಲಿ ದುರ್ನಾತ ಆವರಿಸಿ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಒಡಾಡುವಂತ ಪರಿಸ್ಥಿತಿ ಉಂಟುಮಾಡಿದೆ. ಈ ನಿಲ್ದಾಣಕ್ಕೆ ಬರುವ ಅದೆಷ್ಟು ಜನ ಪ್ರಯಾಣಿಕರು ರೋಗ ರುಜಿನಗಳಿಗೆ ತುತ್ತಾಗಿದ್ದರೋ ದೇವರೆ ಬಲ್ಲ. ಇಂತಹ ಸ್ಥಿತಿಯಲ್ಲಿ ಬಡವರು ದಲಿತರ ಅಸಹಾಯಕತೆಯನ್ನ ದುರ್ಬಳಕೆ ಮಾಡಿಕೊಂಡು ಅವರಿಂದ ಬರಿಗೈಯಲ್ಲಿ ಸ್ವಚ್ಚತೆ ಮಾಡಿಸಿರುವುದು ನಿಜಕ್ಕೂ ಖಂಡನಾರ್ಹವಾಗಿದೆ.

    ಬಸ್ ನಿಲ್ದಾಣದೊಳಗೆ ನೂರಾರು ಪ್ರಯಾಣಿಕರ ಸಮ್ಮುಖದಲ್ಲೆ ಸುಡುವ ಬಿಸಿಲಿನಲ್ಲಿ ಬರಿ ಮೈಯಲ್ಲಿದ್ದ ಆ ದಲಿತ ಬಾಲಕ ಮಲವನ್ನ ಬಾಚುತ್ತಿದ್ದದ್ದು ಮಾತ್ರ ಇಡೀ ಮನುಕುಲವನ್ನೆ ಪ್ರಶ್ನಿಸಿದೆ. ಬಾಲಕ ಹಾಗೂ ವ್ಯಕ್ತಿ ಇಬ್ಬರಿಂದ ಬರಿ ಕೈಗಳಲ್ಲಿ ನಿಲ್ದಾಣದಿಂದ ಬೇರೆಡೆಗೆ ಮಲ ಎತ್ತುವ ಕೆಲಸ ಮಾಡಿಸುವ ಮೂಲಕ ಮಾನವ ಹಕ್ಕು ಉಲ್ಲಂಘನೆ, ಹಾಗೂ ಮಲ ಹೊರುವ ಪದ್ದತಿ ನಿಷೇಧ ಕಾನೂನು ಉಲ್ಲಂಘನೆ ಮಾಡಲಾಗಿದೆ.

    ಮಾನವನಿಂದ ಮಲ ಹೊರುವ ಪದ್ದತಿ ನಿಷೇಧ ಹಾಗೂ ಬಾಲಕಾರ್ಮಿಕ ಪದ್ದತಿ ನಿಷೇಧ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಅಧಿಕಾರಿಗಳ ಸಮ್ಮುಖದಲ್ಲೆ ಉಲ್ಲಂಘನೆಯಾಗಿರುವುದು ನಿಜಕ್ಕೂ ದುರಂತ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರದಲ್ಲಿರುವ ಬಸ್ ನಿಲ್ದಾಣದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಅಧಿಕಾರಿ, ಸಿಬ್ಬಂದಿಗಳು ನಿರ್ಭೀತಿಯಿಂದ ದಲಿತರ ಕೈಯಲ್ಲಿ ಇಂತಹ ಅನಿಷ್ಟದ ಕೆಲಸ ಮಾಡಿಸಿರುವುದು ಸಚಿವರ ಕಾರ್ಯದಕ್ಷತೆಯನ್ನೇ ಅಣಕಿಸುವಂತೆ ಮಾಡಿದೆ.

    ಇಂತಹ ಘಟನೆ ರಾಜ್ಯದ ಯಾವುದೇ ಗ್ರಾಮಗಳಲ್ಲೂ ಸಂಭವಿಸಬಾರದು.ಈ ಘಟನೆ ನಾಗರೀಕ ಸಮಾಜದ ತಲೆ ತಗ್ಗಿಸುವಂತಾಗಿದೆ. ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಮಲ ಹೊರುವ ಪದ್ದತಿ ಜಾತಿ ಪದ್ದತಿ ಜೀವಂತವಾಗಿರುವುದಕ್ಕೆ ಘಟನೆಯೇ ಸಾಕ್ಷಿ. ಸಾಮಾಜಿಕ ಹೋರಾಟಗಾರನಾದ ನಾನು ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇನೆ. ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಇಂತಹ ಘಟನೆಗಳಿಗೆ ತಾರ್ಕಿಕ ಅಂತ್ಯ ಕಾಣಲು ಇನ್ನೂ ವಿಶೇಷ ಕಾನೂನು ತರುವುದು ಅನಿವಾರ್ಯವಾಗಿದೆ .

    –ಜೆಟ್ಟಿ ಅಗ್ರಹಾರ ನಾಗರಾಜು, ಸಾಮಾಜಿಕ ಹೋರಾಟಗಾರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.