ಘಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ 1 ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ಇದೀಗ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಇಬ್ಬರು ಸಹೋದರರ ವಿರುದ್ಧ ಅವರ ತಾಯಿ ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಘಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿನಿ ಹೊಟ್ಟೆ ನೋವು ಎಂದು ಮನೆಯಲ್ಲಿ ಹೇಳಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿ ಎಂದು ಬೆಳಕಿಗೆ ಬಂದಿದೆ.
ಮನೆಯಲ್ಲಿ ಅಮ್ಮ ಇಲ್ಲದಿದ್ದಾಗ ಯುವಕರಿಬ್ಬರೂ ಶಾಲೆಗೆ ಹೋಗುತ್ತಿದ್ದ ತಂಗಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದರು. ಅಲ್ಲದೆ, ಈ ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 376ಡಿ (ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಶಾಲಿಮಾರ್ ಗಾರ್ಡನ್ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಿದ್ಧಾರ್ಥ ಗೌತಮ್ ಹೇಳಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


