ತೆಲಂಗಾಣದಲ್ಲಿ ಹುಟ್ಟುಹಬ್ಬದ ದಿನ ಹೃದಯಾಘಾತದಿಂದ 16 ವರ್ಷದ ಯುವಕ ಸಾವನ್ನಪ್ಪಿದ್ದು,ಮೃತದೇಹದೊಂದಿಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಕುಟುಂಬದವರು ಅಂತಿಮ ದರ್ಶನ ಪಡೆದರು. ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
ಸಿ.ಎಚ್.ಸಚಿನ್ (16) ಮೃತರು. ಆಸಿಫಾಬಾದ್ ಮಂಡಲದ ಬಾಬಾಪುರ ಗ್ರಾಮದ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಜಮಾಯಿಸಿದ್ದರು. ಮನೆಯವರು ಮಗನಿಗಾಗಿ ದೊಡ್ಡ ಸಂಭ್ರಮಾಚರಣೆಯನ್ನು ಸಿದ್ಧಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನಡುವೆ ಸಚಿನ್ ಇದ್ದಕ್ಕಿದ್ದಂತೆ ಕುಸಿದುಬಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಹೃದಯಾಘಾತದಿಂದ ಸಚಿನ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ಮಗನ ಪಾರ್ಥಿವ ಶರೀರದೊಂದಿಗೆ ಹುಟ್ಟುಹಬ್ಬ ಆಚರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳಿಕ ಹುಟ್ಟುಹಬ್ಬ ಆಚರಿಸಿ ಸಚಿನ್ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯಸಂಸ್ಕಾರ ಮಾಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


