ಆರ್ಥಿಕ ವರ್ಷದ ಮೊದಲ ದಿನ ಎಲ್ ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ಸರ್ಕಾರ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಇನ್ನು 5ಕೆಜಿ ಎಫ್ ಟಿಎಲ್ (ಫ್ರೀ ಟ್ರೇಡ್ ಎಲ್ ಪಿಜಿ) ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್ 01) ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದೆ.
ಈ ಹಿಂದೆ ಮಾರ್ಚ್ 1ರಿಂದ ಅಂದರೆ ಇಂದಿನಿಂದ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿತ್ತು ಮಾರ್ಚ್ ಮೊದಲ ದಿನವೇ. ತೈಲ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿದ್ದವು. ಈ ಹಿಂದೆ ಜನವರಿ, ಫೆಬ್ರವರಿ ತಿಂಗಳಲ್ಲೂ ಬೆಲೆ ಏರಿಕೆಯಾಗಿತ್ತು. ಈಗ ಆರ್ಥಿಕ ವರ್ಷದ ಆರಂಭದಲ್ಲಿ ವಾಣಿಜ್ಯ ಸಿಲಿಂಡರ್ ಗಳಿಗೆ ಇಳಿಕೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


