ಮೈಸೂರು: ದಟ್ಟಗಳ್ಳಿ ರಿಂಗ್ ರಸ್ತೆಯ ಮೈಸೂರು ವಿಶ್ವವವಿದ್ಯಾನಿಲಯ ಬಡಾವಣೆ ಬಳಿಕ ಸಿಗುವ ಮಾರಮ್ಮನ ದೇವಾಲಯದ ಕೂಗಳತೆ ದೂರದಲ್ಲಿ ಈ ಬಾವಿ ಪತ್ತೆಯಾಗಿದೆ. ಕಳೆದ ಕೆಲ ದಿನಗಳಿಂದ ಮೈಸೂರು ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣಕ್ಕೋ ಏನೋ ರಿಂಗ್ ರಸ್ತೆಯಲ್ಲಿ ಈ ಬೃಹತ್ ಹೊಂಡ ಪತ್ತೆಯಾಗಿದೆ.
ಶುಕ್ರವಾರ ತಡ ರಾತ್ರಿ ಈ ಬಗ್ಗೆ ಮಾಹಿತಿ ಪಡೆದ ಸಂಬಂಧಿಸಿದ ಅಧಿಕಾರಿಗಳು ಪೊಲೀಸರ ನೆರವಿನಿಂದ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಸಂಚಾರ ನಿರ್ಬಂಧಿಸಿದ್ದಾರೆ. ಆ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಹದಿನೈದು ವರ್ಷಗಳ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಎಡಿಬಿ ಸಹಾಯದಿಂದ ಈ ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಿತ್ತು. ಅಂದಿನ ಮುಡಾ ಅಧ್ಯಕ್ಷರಾಗಿದ್ದ ಸಂದೇಶ್ ನಾಗರಾಜ್ ಅವರ ಅವಧಿಯಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿತ್ತು. ನೂರಾರು ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ಇತ್ತೀಚೆಗೆ ವರ್ಷದ ಹಿಂದೆಯಷ್ಟೆ ರಿಂಗ್ ರಸ್ತೆ ಹಾಗೂ ಸರ್ವಿಸ್ ರಸ್ತೆಗೆ ಒಪ್ಪಂದ್ದದಂತೆ ಬಾಕಿ ಉಳಿದಿದ್ದ ಡಾಂಬರು ಹಾಕಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


