ಬಳ್ಳಾರಿ: ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯ ಪ್ರದೀಪ್ ಆಚಾರಿ(5) ಮೃತಪಟ್ಟ ಬಾಲಕನಾಗಿದ್ದಾನೆ. ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಸಿದ್ದಮ್ಮನ ಹಳ್ಳಿಯಲ್ಲಿ ಕಳೆದ ಒಂದು ವಾರಗಳಿಂದಲೂ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಗ್ರಾಮದಲ್ಲಿ, ಮನೆಗಳ ಸುತ್ತ ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


