ತಿರುವನಂತಪುರಂ: ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ 75 ವರ್ಷ ವಯಸ್ಸಿನ ವೃದ್ಧನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
23 ವರ್ಷದ ಸಂತ್ರಸ್ತ ಯುವತಿ ಒಡಿಶಾ ಮೂಲದವಳಾಗಿದ್ದಾಳೆ, ಆರೋಪಿ ವೃದ್ಧ ಕೇರಳ ಮೂಲದವನು ಎಂದು ತಿಳಿದು ಬಂದಿದೆ. ಯುವತಿ ಗಜಪತಿ ಜಿಲ್ಲೆಯವರಾಗಿದ್ದು, ಮನೆ ಕೆಲಸ ಮಾಡುತ್ತಿದ್ದಳು. ಈಕೆಯ ಮೇಲೆ ಜ್ಯೂಸ್ ಎರಚಿ ವೃದ್ಧ ಕೆ.ಶಿವಪ್ರಸಾದ್ ಎಂಬಾತ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ಆರೋಪಿ ವೃದ್ಧ ತಲೆಮರೆಸಿಕೊಂಡಿದ್ದಾನೆ. ಅಲ್ಲದೇ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
ಇನ್ನು ಆರೋಪಿ ಕೆ.ಶಿವಪ್ರಸಾದ್ ಕೇರಳ ರಾಜ್ಯ ಕೃಷಿ ನಿಗಮ, ತೋಟಗಾರಿಕಾ ಉತ್ಪನ್ನಗಳ ಅಭಿವೃದ್ಧಿ ನಿಗಮ, ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮಗಳಲ್ಲಿಯೂ ಸೇವೆ ಸಲ್ಲಿರುವ ಮಾಹಿತಿಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296