ಪಾವಗಡ: ಮೂತ್ರಪಿಂಡದ ಕಾಯಿಲೆಯಿಂದ ಬೇಸತ್ತು ಎಪ್ಪತ್ತೇಳು ವರ್ಷದ ವೃದ್ಧರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಾವಗಡದಲ್ಲಿ ಮಂಗಳವಾರ ನಡೆಯಿತು.
ಬಳ್ಳಾರಿ ಮೂಲದ ಶಂಕರಪ್ಪ(77) ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಪಾವಗಡ ಪಟ್ಟಣದ ಬೆಟ್ಟದ ಬುಡದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಾಕುವಿನಿಂದ ತಮ್ಮ ಕುತ್ತಿಗೆ ಮತ್ತು ದೇಹದ ಭಾಗಗಳಲ್ಲಿ ಗಾಯಗೊಳಿಸಿಕೊಂಡು ಇವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ವೃದ್ಧನನ್ನು ರಕ್ಷಿಸಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಶಂಕರಪ್ಪಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲವು ದಿನಗಳಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಶಂಕರಪ್ಪ, ಹಲವು ಸಲ ಚಿಕಿತ್ಸೆ ಪಡೆದರೂ ಯಾವುದೇ ಫಲಿತಾಂಶ ದೊರೆತಿಲ್ಲ ಎಂಬ ಕಾರಣದಿಂದಾಗಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪಿಎಸ್ ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW