ಆನೇಕಲ್: ಬಿಬಿಎ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ.
ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದುರ್ದೈವಿ ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿಯಾಗಿದ್ದು, ಬಿಬಿಎ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


