ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಂಗನಲ್ಲೂರು ಗ್ರಾಮದ ಶ್ರೀಧರ್(44) ಮೃತರಾಗಿದ್ದಾರೆ.
ಬಾಳೆಹಣ್ಣು ವ್ಯಾಪಾರಿಯಾಗಿದ್ದ ಮೃತ ಶ್ರೀಧರ್ ಇಂದು ಬೆಳಗ್ಗೆ ಕಾಮಗೆರೆ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದಾಗ, ಈ ವೇಳೆ ಯಮನಂತೆ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ ನಡಿ ಸಿಲುಕಿ ಬೈಕ್ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಹನೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296