ಬಯಲು ಶೌಚಕ್ಕೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ನಡೆದಿದೆ. ಬಯಲು ಶೌಚಾಲಯಕ್ಕೆ ಹೋದ ಬಾಲಕ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಾಣೇಶ್(15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು. ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣದೆ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಪ್ರಾಣೇಶ್ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ- ತಾಯಿ ಬಳಿ ಬಂದಿದ್ದ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296