ಬೆಂಗಳೂರು: ಕ್ರಿಸ್ಮಸ್ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಉಳಿದಿದೆ. ಈ ಮಧ್ಯೆ ಕ್ರಿಸ್ಮಸ್ ಸಲುವಾಗಿ ಬೆಂಗಳೂರಿನಲ್ಲಿ ಕೇಕ್ ಶೋ ಆಯೋಜನೆ ಮಾಡಿದ್ದು, ಇಂದಿನಿಂದ ಶುರುವಾಗಿ ಜನವರಿ 01ರ ವರೆಗೂ ನಡೆಯಲಿದೆ.
ಯುಬಿ ಸಿಟಿ ಸಮೀಪದ ಸೇಂಟ್ ಜೋಸೆಫ್ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ ಕೇಕ್ ಶೋ ಥಿಂಕ್ ಲೋಕಲ್- ಆಕ್ಟ್ ಗ್ಲೋಬಲ್ ಪರಿಕಲ್ಪನೆಯಲ್ಲಿ ಕೇಕ್ ಪ್ರದರ್ಶನಕ್ಕೆ ಜಾಗತಿಕ ವಿನ್ಯಾಸದ ಟಚ್ ನೀಡಲಾಗಿದೆ. ಈ ಕೇಕ್ ಶೋಗೆ ಭೇಟಿ ನೀಡಿ ವಿಶೇಷ ರೀತಿಯ, ವಿಶೇಷ ವಿನ್ಯಾಸದ ಕೇಕ್ ಗಳನ್ನು ಸವಿಯಲು ಸುವರ್ಣಾವಕಾಶವನ್ನು ನೀಡಲಾಗಿದೆ.


