ಬಳ್ಳಾರಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಚೆನ್ನುಪಾಟೀಲ(26), ಯುವರಾಜ(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮಂಜು, ವೀರಣ್ಣ, ಚಿದಂಬರಂ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದ ಐಯಪ್ಪಸ್ವಾಮಿ ಮಾಲಾಧಾರಿಗಳ ವಾಹನ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ NH 50 ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ.
ಗಾಯಾಳುಗಳು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಖಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


