ಚಿತ್ರದುರ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪ ಘಟನೆ ನಡೆದಿದೆ.
ಚಿತ್ರಯ್ಯನಹಟ್ಟಿ ನಿವಾಸಿ ವೆಂಕಟೇಶ(55), ಸೂಜಿಮಲ್ಲೇಶ ನಗರದ ವೆಂಕಟೇಶ(55) ಮೃತರಾಗಿದ್ದಾರೆ. ಮತ್ತೊಬ್ಬರಿಗೆ ಗಾಯಗಳಾಗಿವೆ. ಗಾಯಾಳು ಕಿಶೋರ್ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಚಿಕಿತ್ಸೆ ಮುಂದುವರೆದಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


