ನವದೆಹಲಿ: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಬಂಧಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ. ನವೀನ್ ಖಿಚಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಪರಾರಿಯಾಗಿದ್ದರು.
ಎರಡು ಅಂತಸ್ತಿನ ಕಟ್ಟಡದಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಲೇನ್ ಕಿರಿದಾಗಿದ್ದು, ಓವರ್ ಹೆಡ್ ತಂತಿಗಳಿಂದ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಗ್ನಿಶಾಮಕದಳದವರು ಸವಾಲುಗಳನ್ನು ಎದುರಿಸಿದರು. ನಾವು ಎದುರಿಸಿದ ಮತ್ತೊಂದು ಸವಾಲೆಂದರೆ ಯಾವುದೇ ನೀರಿನ ಮೂಲವಿರಲಿಲ್ಲ. ನೇತಾಡುತ್ತಿದ್ದ ವಿದ್ಯುತ್ ತಂತಿಗಳು ದೊಡ್ಡ ಸಮಸ್ಯೆಯಾಗಿದ್ದವು ಎಂದು ತಿಳಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸಲು ಆಯೋಗದ ತಂಡವು ಆಸ್ಪತ್ರೆಗೆ ಭೇಟಿ ನೀಡಲಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


