ದಾವಣಗೆರೆ: ರಂಜಾನ್ ಉಪವಾಸ ಮುಗಿದ ಬಳಿಕ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಘಟನೆಯಲ್ಲಿ ಅಸ್ವಸ್ಥಗೊಂಡವರ ಪೈಕಿ ಬಾಲಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ.
ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಹಜರತ್ ಬಿಲಾಲ್ ಎಂಬುವರ ಪುತ್ರ ಇರ್ಫಾನ್(6) ಮೃತಪಟ್ಟ ಬಾಲಕನಾಗಿದ್ದಾನೆ.
ಮಾರ್ಚ್ 15ರಂದು ದಾವಣಗೆರೆಯ ಹರಿಹರ ತಾಲೂಕಿನ ಮಲೆಬೆನ್ನೂರಿನ ಜಾಮೀಯಾ ಮಸೀದಿ ಬಳಿ ಮಕ್ಕಳು ಪಾನಿಪುರಿ ಸೇವಿಸಿದ್ದರು.
ಪಾನಿಪೂರಿ ಸೇವಿಸಿದ್ದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ.
ಘಟನೆಯ ಬಳಿಕ ಪಾನಿಪುರಿ ಅಂಗಡಿ ಮಾಲಿಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲೆಬೆನ್ನೂರು ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


