ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(8/ಆಗಸ್ಟ್) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ.
ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


