ಯುವತಿಯರ ಫೊಟೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಪ್ರಕರಣದಡಿ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಇಲ್ಲಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬಾಗಲೂರು ಮೂಲದ ಆರೋಪಿ ಬಂಧಿತರಾಗಿದ್ದಾರೆ. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂರು ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಆರೋಪಿಗಳು ಅಪ್ರಾಪ್ತೆಯ ಇನ್ ಸ್ಟಾಗ್ರಾಮ್ ಖಾತೆಯಿಂದ ಫೊಟೋ ತೆಗೆದುಕೊಂಡು, ಅಶ್ಲೀಲವಾಗಿ ಮಾರ್ಫ್ ಮಾಡಿ ನಕಲಿ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಉಳಿದಿಬ್ಬರು ಶಾಲೆಯಲ್ಲಿ ಕಲಿಯುತ್ತಿದ್ದು, ಈ ಮೂವರೂ ಪರಸ್ಪರ ಸ್ನೇಹಿತರು. ಕೀಟಲೆಗಾಗಿ ಯುವತಿಯರ ಫೊಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


