ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು ಮಾಜಿ ಸಚಿವ ರೇವಣ್ಣ ಕುರಿತ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ರೇವಣ್ಣಗೆ ಮತ್ತೆ ಜೈಲಾ ಅಥವಾ ಬೇಲಾ ಅನ್ನೋ ಕುತೂಹಲ ಮೂಡಿಸಿದೆ. 47 ವರ್ಷದ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಕೆಲವು ಅಶ್ಲೀಲ ವೀಡಿಯೊಗಳು ಹಾಸನ ಜಿಲ್ಲೆಯಾದ್ಯಂತ ಹರಿದಾಡಿದ್ದವು. ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದಾರೆ. ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಹಾಸನ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ದೇವರಾಜೇಗೌಡ ಎಸ್‌ಐಟಿ ಕಸ್ಟಡಿಯಲ್ಲಿರುವಾಗಲೇ ಹೊಸ ಆಡಿಯೋ ಸದ್ದು ಮಾಡಿದೆ.
ಇದರ ನಡುವೆ ಇವತ್ತು ಹಾಸನಕ್ಕೆ ದೇವರಾಜೇಗೌಡರನ್ನ ಎಸ್‌ಐಟಿ ಅಧಿಕಾರಿಗಳು ಕರೆತರಲಿದ್ದಾರೆ. ಸಂಜೆ ಕೋರ್ಟ್ ಮುಂದೆ ಹಾಜರುಪಡಿಸುವ ಮುನ್ನ ಹಾಸನದಲ್ಲಿ ವಿಚಾರಣೆ ಮಾಡುವ ಸಾಧ್ಯತೆಯಿದೆ. ಹಾಸನದಲ್ಲಿರುವ ದೇವರಾಜೇಗೌಡ ನಿವಾಸ, ಕಛೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ದೇವರಾಜೇಗೌಡರನ್ನ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


