ಬೆಂಗಳೂರು : ಕೆ. ಆರ್. ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪದಡಿ ಬಾಲಕ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ್ದಕ್ಕಾಗಿ ಆತನ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಐಟಿಐ ಗೇಟ್ ಮುಖ್ಯರಸ್ತೆ ಹಾಗೂ ಕೆ. ಆರ್. ಪುರ ರೈಲ್ವೆ ನಿಲ್ದಾಣ ಬಳಿಯ ಕೆಳ ಸೇತುವೆ ರಸ್ತೆಯಲ್ಲಿ ಇಬ್ಬರು ಪ್ರತ್ಯೇಕವಾಗಿ ವೀಲೆ ಮಾಡುತ್ತಿದ್ದರು.
ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.


