ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಟಿಪ್ಪರ್ ವಾಹನದಡಿಗೆ ಬಿದ್ದು ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಅದ್ವೈತ್ ಅಕ್ಷಯ್ ಮೃತ ಮಗುವಾಗಿದ್ದಾನೆ.
ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದ ಶಾಬಂದರ್ ವಂಟಮೂರಿ ರಸ್ತೆಯಲ್ಲಿ ವೇಗವಾಗಿ ಬಂದ ಟಿಪ್ಪರ್ ರಸ್ತೆ ಬದಿಯಲ್ಲಿ ಆಡುತ್ತಿದ್ದ ಅದ್ವೈತ್ ಅಕ್ಷಯ್ ಗೆ ಡಿಕ್ಕಿಯಾಗಿದೆ.
ಮಗು ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಮೃತಪಟ್ಟಿದೆ. ಯಮಕನಮರಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


