ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ದಸರಾ ಹಬ್ಬವನ್ನು ದಿನಾಂಕ 15. 10. 2023 ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು. ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


