ಬೆಂಗಳೂರು: ಸೂಕ್ತ ನಿರ್ವಹಣೆ ಮಾಡದ ಹಿನ್ನೆಲೆ ಬೆಂಗಳೂರಿನ ಐತಿಹಾಸಿಕ ದೇಗುಲ ಬಸವನಗುಡಿಯಲ್ಲಿರುವ ದೊಡ್ಡ ಗಣೇಶ ದೇವಸ್ಥಾನದ ವಿಮಾನಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಈ ಕುರಿತಾಗಿ ಪತ್ರ ಬರೆದರೂ ಪುರಾತತ್ವ ಇಲಾಖೆ ಇನ್ನೂ ಕ್ರಮಕೈಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಆರೋಪಿಸಿದೆ.
ಅಲ್ಲದೇ, ಮಳೆ ಏನಾದರೂ ಬಂದರೆ ಬಿಟ್ಟಿರುವ ಬಿರುಕು ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಬೇಗ ಗೋಪುರ ಸರಿಪಡಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.



