ವಡೋದರ: ನಿರಂತರ ಮಳೆಯಿಂದಾಗಿ ಗುಜರಾತ್ ನಲ್ಲಿ ಅವಾಂತರ ಸೃಷ್ಟಿಯಾಗಿದೆ. ರಾಜ್ಯದಾದ್ಯಂತ ಸುಮಾರು 137 ಜಲಾಶಯಗಳು, 24 ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.
ಇದೇ ವೇಳೆ ನೀರಿನಿಂದ ಆವೃತ್ತವಾದ ಮನೆಯೊಂದರ ಮೇಲ್ಛಾವಣಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿರುವ ಘಟನೆ ವಡೋದರದ ಅಕೋಟ ಕ್ರೀಡಾಂಗಣ ಪ್ರದೇಶದಲ್ಲಿ ನಡೆದಿದೆ. ಸದ್ಯ ಮನೆಯ ಮೇಲೆ ಮೊಸಳೆ ಇರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುಜರಾತ್ ನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸಂಬಂಧಿತ ಅವಘಡಗಳಿಂದಾಗಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ ಸುಮಾರು 17,800 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಸೌರಾಷ್ಟ್ರ ಭಾಗದ ದೇವ್‌ಭೂಮಿ ದ್ವಾರಕಾ, ಜಾಮ್‌ನಗರ, ರಾಜ್‌ಕೋಟ್ ಮತ್ತು ಪೋರಬಂದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದ್ದು, ಆತಂಕ ಸೃಷ್ಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q