ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯನ್ನು ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ.
ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ (River) ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು ಎನ್ನಲಾಗಿದೆ.
ಸ್ನಾನ ಮಾಡುತ್ತಿದ್ದ ಸಂಧರ್ಭದಲ್ಲಿ ಮಹಾದೇವ ಖುರೆಯನ್ನು ಮೊಸಳೆ ಎಳೆದುಕೊಂಡು ಹೋಗಿ ತೀವ್ರವಾಗಿ ಗಾಯಮಾಡಿದೆ. ಪರಿಣಾಮ ಮಹಾದೇವ ಖುರೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನದಿಯಲ್ಲಿ ಶವ ಕಂಡ ಬಳಿಕ ಸ್ಥಳೀಯರು ಶವವನ್ನ ಹೊರತೆಗೆದಿದ್ದು ಮರೋಣತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA