ರಾಮನಗರ: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂ.ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ.
ರಾಮನಗರದಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇಂದು ೨ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ, ನಮ್ಮ ನಾಯಕರಾಗಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಬಡವರಿಗಾಗಿ ಒಂದಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ. ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಅಂದ್ರೆ ಏನೂ ಮಾಡೋಕಾಗಲ್ಲ ಎಂದು ನುಡಿದಿದ್ದಾರೆ.
ಜೆಡಿಎಸ್ ನವರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ರು, ಸಸ್ಪೆಂಡ್ ಮಾಡಿದ್ದರು. ಆದ್ರೆ ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗ್ಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296