ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಹೊಸದುರ್ಗ ಪಟ್ಟಣದಲ್ಲಿ ಪತ್ತೆಯಾಗಿದ್ದು, ಪತಿ ಮತ್ತು ಕುಟುಂಬಸ್ಥರ ವಿರುದ್ಧ ಮೃತಳ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಈ ಹಿನ್ನಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಮೂಲದ ಗೀತಶ್ರೀ ಮೃತ ದುರ್ದೈವಿಯಾಗಿದ್ದಾರೆ.
ಪ್ರಭುಕುಮಾರ್ ಹಾಗೂ ಗೀತಶ್ರೀ ಐದಾರು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಸುಂದರ ದಾಂಪತ್ಯಕ್ಕೆ ಮುದ್ದಾದ ಮಗಳು ಇದ್ದಳು.
ಆದರೆ, ಇತ್ತೀಚೆಗೆ ಪ್ರಭು, ಪತ್ನಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗಷ್ಟೇ ಪತ್ನಿ ಜೊತೆ ಗಲಾಟೆ ಮಾಡಿ ತವರುಮನೆಗೆ ಕಳಿಸಿದ್ದನು. ಮೂರ್ನಾಲ್ಕು ದಿನಗಳ ಹಿಂದಷ್ಟೇ ಗೀತಶ್ರೀ ಪತಿಯ ಮನೆಗೆ ವಾಪಾಸಾಗಿದ್ದಳು. ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಗೀತಶ್ರೀ ಮೃತದೇಹ ಪತ್ತೆಯಾಗಿದೆ.
ಪ್ರಭುಕುಮಾರ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿ ನಾಪತ್ತೆ ಆಗಿದ್ದಾನೆ. ಹಣದ ವ್ಯಾಮೋಹಕ್ಕೆ ಬಿದ್ದ ಪತಿರಾಯ ಪತ್ನಿಯ ಜೀವವನ್ನೇ ನುಂಗಿದ್ದಾನೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296