ತುಮಕೂರು: ಹೇಮಾವತಿ ಲಿಂಕ್ ಕೇನಾಲ್ ಕಾಮಗಾರಿ ವಿರೋಧಿಸಿ ಇಂದು ನಡೆದ ತುಮಕೂರು ಬಂದು ಬಹುತೇಕ ಯಶಸ್ವಿಯಾಗಿದೆ.
ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ನಂತರ ತುಮಕೂರು ಬಂದು ಬೆಂಬಲಿಸಿ ಬಹುತೇಕ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇನ್ನುಳಿದಂತೆ ಬ್ಯಾಂಕ್ ಗಳು ಹಾಗೂ ಆಸ್ಪತ್ರೆಗಳು ತೆರೆದಿದ್ದವು.
ಬೆಳಗ್ಗೆ ಸುಮಾರು 10 ಗಂಟೆ ಬೆಳಗ್ಗೆ ತುಮಕೂರಿನ ಟೌನ್ ಹಾಲ್ ಬಳಿ ಜಮಾಯಿಸಿದ ಹೋರಾಟಗಾರರು ರಸ್ತೆ ತಡೆ ನಡೆಸಿದರು.
ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದ್ದ ಬಂದ್ಗೆ ರೈತ ಸಂಘ ಹಾಗೂ ವಿವಿಧ ಮಠಗಳ ಮಠಾಧೀಶರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಹೋರಾಟಕ್ಕೆವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA