nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ
    ಜಿಲ್ಲಾ ಸುದ್ದಿ June 25, 2024

    ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

    By adminJune 25, 2024No Comments2 Mins Read
    udupi

    ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.

    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಜೂ.24ರಂದು ಸೋಮವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಅವರು ಮಾತನಾಡುತಿದ್ದರು.


    Provided by
    Provided by

    ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೋಸಿಜರ್ ಕೋಡ್(ಸಿಆರ್‌ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದುವೇ ನಿಜವಾದ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್. ಈ ಮೂರು ಕಾನೂನುಗಳು ರತ್ನಗಳು ಇದ್ದಂತೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ಹೊಸ ಕಾನೂನು ಯಾವ ಉದ್ದೇಶಕ್ಕೆ ತರಲಾಗಿದೆ ಎಂಬುದು ಅರ್ಥ ಆಗುತ್ತಿಲ್ಲ ಎಂದರು.

    ಭಾರತೀಯ ದಂಡ ಕ್ರಿಯಾ ಸಂಹಿತೆ ಕಾನೂನುಗಳನ್ನು ಬದಲಾಯಿಸುವಂತೆ ಜನರಿಂದ ಯಾವುದೇ ಒತ್ತಾಯಗಳು ಬಂದಿಲ್ಲ ಮತ್ತು ಯಾವುದೇ ಪಕ್ಷಗಳ ಪ್ರಣಾಳಿಕೆಯಲ್ಲೂ ಆ ಬೇಡಿಕೆ ಇರಲಿಲ್ಲ. ಆದರೂ ಏಕಾಏಕಿ ಈ ಹೊಸ ಕಾನೂನುಗಳನ್ನು ಜನರ ಮೇಲೆ ಏರಲಾಗುತ್ತಿದೆ ಎಂದ ಅವರು, ಕಾಲಕ್ಕೆ ತಕ್ಕಂತೆ ಕಾನೂನು ಬದಲಾಗಬೇಕು. ಅದರಂತೆ ಹಲವು ಕಾನೂನುಗಳಿಗೆ ತಿದ್ದುಪಡಿ ಕೂಡ ಆಗಿದೆ. ಆದರೆ ಇಡೀ ಕಾನೂನುಗಳನ್ನೇ ಬದಲಾಯಿಸುವ ಅಗತ್ಯ ಇದೆಯೇ ಎಂಬುದು ಎಲ್ಲರ ಪ್ರಶ್ನೆಯಾಗಿದೆ ಎಂದು ಅವರು ತಿಳಿಸಿದರು.

    ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರ ನಾಥ್ ಶಾನುಭೋಗ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

    ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಮೈಕಲ್ ರೊಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು…

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.